ಸಂವಿಧಾನ ದ್ವೇಷಿ RSS ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದೆ! ಇದನ್ನು ಹಿಮ್ಮೆಟ್ಟಿಸೋಣ: ಸಿಎಂ

blank

ಬೆಳಗಾವಿ: ಸಂವಿಧಾನ ದ್ವೇಷಿಯಾಗಿರುವ ಆರ್​ಎಸ್​ಎಸ್​ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದ್ದು, ಇದನ್ನು ನಾವು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಇದನ್ನೂ ಓದಿ: ಗ್ಯಾಸ್​ಗೆ ವಾಸನೆಯೇ ಇಲ್ಲ! ಹೀಗಿದ್ದರೂ​ ಸಿಲಿಂಡರ್​ ಲೀಕ್​ ಆಗ್ತಿದೆ ಅಂತ ತಿಳಿಸೋದು ಈ ಕೆಮಿಕಲ್​ ಮಾತ್ರ​ | Gas Leakage

“ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ, ಬಿಜೆಪಿ ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಾ ಭಾರತವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯ ಈ ಯತ್ನವನ್ನು ನಾವು ಸೋಲಿಸಬೇಕು. ಇದಕ್ಕೆ ಗಾಂಧಿ, ಅಂಬೇಡ್ಕರ್ ನಮಗೆ ಮಾರ್ಗದರ್ಶಕರು” ಎಂದರು.

“ಸಂವಿಧಾನ ಜಾರಿಯಾದಾಗ ಬಿಜೆಪಿ ಪರಿವಾರ ಅಂಬೇಡ್ಕರ್ ಭಾವಚಿತ್ರವನ್ನು, ಸಂವಿಧಾನವನ್ನು ಸುಟ್ಟಿತ್ತು. ಇದನ್ನು ಈ ದೇಶ, ಈ ದೇಶದ ಜನ ಸಮುದಾಯ ಯಾವತ್ತೂ ಕ್ಷಮಿಸುವುದಿಲ್ಲ, ಮರೆಯುವುದಿಲ್ಲ. ಹಲವು ಭಾಷೆ, ಜಾತಿ, ಧರ್ಮ‌ ಭಾರತದ ಶಕ್ತಿ. ಬಿಜೆಪಿ ಪರಿವಾರ ಗಾಂಧಿ, ಅಂಬೇಡ್ಕರ್​ರನ್ನು ದ್ವೇಷಿಸುತ್ತದೆ. ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ” ಎಂದರು.‌

ಇದನ್ನೂ ಓದಿ: ಎಸ್‌ಸಿ, ಎಸ್‌ಟಿ ಆಯೋಗಕ್ಕೆ ಅಧ್ಯಕ್ಷರ ನೇಮಕ ವಿಳಂಬ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

“ನಾವು ಸಂವಿಧಾನ ರಕ್ಷಿಸಿದರೆ ಇದೇ ಸಂವಿಧಾನ ನಮ್ಮೆಲ್ಲರನ್ನೂ ರಕ್ಷಿಸುತ್ತದೆ. ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು. ಅದು ಮಾತ್ರ ನಮ್ಮ ನಿಜವಾದ ಗೆಲುವು. ಗಾಂಧಿ ಅಂಬೇಡ್ಕರ್ ಅವರ ಆಶಯಗಳು, ಮೌಲ್ಯಗಳ ಈಡೇರಿಕೆಗೆ ನಾವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ. ಇದಕ್ಕಾಗಿ ಬಜೆಟ್ ನಲ್ಲಿ 52 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಹಣವನ್ನು ನೇರವಾಗಿ ಜನರ ಖಾತೆಗೆ ಹಾಕಿ ರಾಜ್ಯದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಿದ್ದೇವೆ” ಎಂದು ಹೇಳಿದರು.

ಖೋ ಖೋ ವಿಶ್ವಕಪ್​ನಲ್ಲಿ ಟಿ. ನರಸೀಪುರ ಪ್ರತಿಭೆ ಸಾಧನೆ; ಮಗಳ ಪರಿಶ್ರಮ ನೆನೆದು ಪೋಷಕರು ಭಾವುಕ, ತಂದೆ ಹೇಳಿದ್ದಿಷ್ಟು | B Chaitra

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…