ಸಿ.ಟಿ. ರವಿ ಅವಾಚ್ಯ ಪದ ಬಳಕೆ! ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ಲಕ್ಷ್ಮಿ ದೂರು: ಸಿಎಂ | CT Ravi

ವಿಜಯವಾಣಿ - 2024-12-19T174359.051
Published on

ಬೆಂಗಳೂರು: ಕಾಂಗ್ರೆಸ್​ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಆರೋಪ ಹೊತ್ತಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ (CT Ravi) ವಿರುದ್ಧ ಕಾಂಗ್ರೆಸ್​​ ಭಾರೀ ಆಕ್ರೋಶ ಹೊರಹಾಕಿದೆ. ಸಚಿವೆಗೆ ಅವಾಚ್ಯ ಪದ ಬಳಸಿದ ಹಿನ್ನೆಲೆ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಪೊಲೀಸ್ ಠಾಣೆಯಲ್ಲಿ ಸಚಿವೆ ದೂರು ಸಲ್ಲಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವಾಚ್ಯ ಪದ ಬಳಕೆಯನ್ನು ಅಲ್ಲಗಳೆದಿರುವ ಸಿಟಿ ರವಿ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಅವರು ಅವಾಚ್ಯ ಪದ ಬಳಸಿದ್ದಾರೆಂದು ನಮ್ಮ ಅನೇಕ ಸದಸ್ಯರು ಹೇಳಿದ್ದಾರೆ. ಈ ವೇಳೆ ನಾನು ವಿಧಾನಪರಿಷತ್ತಿನಲ್ಲಿ ಇರಲಿಲ್ಲ. ಇಂತಹ ಪದಪ್ರಯೋಗದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನನೊಂದಿದ್ದು, ಇಂತಹ ಪದಬಳಕೆ ಒಂದು ರೀತಿಯ ಲೈಂಗಿಕ ದೌರ್ಜನ್ಯವಾಗಿದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಿಎಂ ಹೇಳಿದರು.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ಗೆ ಸಿಟಿ ರವಿ ಅವಾಚ್ಯ ಪದ ಬಳಸಿದ್ದಕ್ಕೆ ಕೆರಳಿದ ಕಾಂಗ್ರೆಸ್​ ಕಾರ್ಯಕರ್ತರು, ಸುವರ್ಣಸೌಧದಲ್ಲಿ ರವಿ ವಿರುದ್ಧ ಹಲ್ಲೆಗೆ ಯತ್ನಿಸಿದ್ದಾರೆ. ಸದ್ಯ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರು ನಿಯೋಜನೆಗೊಂಡಿದ್ದು, ಗೇಟ್​ಗಳನ್ನು ಬಂದ್​ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net