More

    ಶಿಶುವಿನಹಾಳಕ್ಕೆ ಮುಖ್ಯಮಂತ್ರಿ ಭೇಟಿ ನಾಳೆ

    ಹಾವೇರಿ: ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಮಾರ್ಚ್ 2 ರಂದು ಸಂಜೆ 6 ಗಂಟೆಗೆ ಶಿಗ್ಗಾಂವ ತಾಲೂಕು ಶಿಶುವಿನಹಾಳಕ್ಕೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
    ಮಾರ್ಚ್ 2ರ ಸಂಜೆ 4-30ಕ್ಕೆ ಬೆಳಗಾಯಿಂದ ಹೊರಟು ಸಂಜೆ 5-30ಕ್ಕೆ ಸವಣೂರ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ರಸ್ತೆ ಮಾರ್ಗವಾಗಿ ಸಂಜೆ 6 ಗಂಟೆಗೆ ಶಿಗ್ಗಾಂವ ತಾಲೂಕು ಶಿಶುವಿನಹಾಳನಲ್ಲಿ ಆಯೋಜಿಸಿರುವ ಶಿಶುವಿನಹಾಳ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಅರ್ಥವ ಯೋಗ ಹಾಗೂ ಪ್ರಕೃತಿ ಚಿಕಿತ್ಸಾ ಕೇಂದ್ರ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 7-30ಕ್ಕೆ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts