ಉಳ್ಳಾಲ ದರ್ಗಾ ಸಮಿತಿಯಿಂದ ಸಿಎಂ ಭೇಟಿ

cm
ಉಳ್ಳಾಲ ಖಾಝಿ ಅಧಿಕಾರ ಸ್ವೀಕಾರ ಮತ್ತು ಶರೀಅತ್ ಕಾಲೇಜು ವಿದ್ಯಾರ್ಥಿಗಳ ವಸತಿ ನಿಲಯ ಶಿಲಾನ್ಯಾಸ ಕಾರ್ಯಕ್ರಮ ಪ್ರಯುಕ್ತ ಉಳ್ಳಾಲ ದರ್ಗಾ ಸಮಿತಿ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದರು
Published on

ವಿಜಯವಾಣಿ ಸುದ್ದಿಜಾಲ ಉಳ್ಳಾಲ

ಉಳ್ಳಾಲ ಖಾಜಿ ಅಧಿಕಾರ ಸ್ವೀಕಾರ ಮತ್ತು ಶರೀಅತ್ ಕಾಲೇಜು ವಿದ್ಯಾರ್ಥಿಗಳ ವಸತಿ ನಿಲಯ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸುವಂತೆ ಉಳ್ಳಾಲ ದರ್ಗಾ ಸಮಿತಿ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಹ್ವಾನ ನೀಡಿತು.
ಆಗಸ್ಟ್ 17ರಂದು ಸಂಜೆ 4ಕ್ಕೆ ಇಂಡಿಯನ್ ಗ್ರಾೃಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಅವರು ಉಳ್ಳಾಲ ಖಾಜಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದೇ ವೇಳೆ ಶರೀಅತ್ ಕಾಲೇಜು ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಶಿಲಾನ್ಯಾಸ ಕಾರ್ಯಕ್ರಮ ದರ್ಗಾ ವಠಾರದಲ್ಲಿ ನಡೆಯಲಿದೆ.

ಸ್ಪೀಕರ್ ಯು.ಟಿ.ಖಾದರ್ ಸಮ್ಮುಖದಲ್ಲಿ ಭೇಟಿಯಾದ ನಿಯೋಗದಲ್ಲಿ ದರ್ಗಾ ಅಧ್ಯಕ್ಷ ಬಿ.ಜಿ.ಹನೀಫ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ, ಕೋಶಾಧಿಕಾರಿ ನಾಝಿಮ್ ರಹ್ಮಾನ್, ದರ್ಗಾ ಮಾಜಿ ಅಧ್ಯಕ್ಷ ಕಣಚೂರು ಮೋನು ಹಾಜಿ, ಸದಸ್ಯ ಅಬ್ದುಲ್ ಖಾದರ್ ಅವುದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net