More

    ಎರಡ್ಮೂರು ತಿಂಗಳಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ; ಸಿಎಂ ಯಡಿಯೂರಪ್ಪ

    ಬೆಳಗಾವಿ: ಕೋವಿಡ್-19 ಕಾರಣದಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಆದರೂ, ಸರ್ಕಾರಿ ನೌಕರರಿಗೆ ವೇತನ, ಅಭಿವೃದ್ಧಿ ಕಾಮಗಾರಿಗಳು ನಿಂತಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

    ಸಾಂಬ್ರಾ ವಿಮಾನ ನಿಲ್ದಾಣ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇನ್ನು ಎರಡ್ಮೂರು ತಿಂಗಳಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಇದನ್ನೂ ಓದಿರಿ ಕರೊನಾ ಸೋಂಕಿತ ಶವವನ್ನು ಲಿಫ್ಟ್​ನಲ್ಲೇ ಬಿಟ್ಟುಹೋದ ಆಸ್ಪತ್ರೆ ಸಿಬ್ಬಂದಿ!

    ಕಳೆದ ವರ್ಷದ ಪ್ರವಾಹ ಮತ್ತು ಅತಿವೃಷ್ಟಿಯಿಂದ ಹಾನಿಯಾಗಿರುವ ಮನೆಗಳ ನಿರ್ಮಾಣ ಪೂರ್ಣಗೊಳಿಸಲು ಕ್ರಮ ವಹಿಸಲಾಗಿದೆ. ಅಲ್ಲದೆ ಸಂತ್ರಸ್ತರ ಖಾತೆಗೆ ಪರಿಹಾರ ಬಿಡುಗಡೆ ಮಾಡಲಾಗುತ್ತಿದೆ. ಈ ವರ್ಷದ ಹಾನಿ ಸಮೀಕ್ಷೆ ನಡೆಯುತ್ತಿದ್ದು, ಸಮೀಕ್ಷಾ ವರದಿ ಬಳಿಕ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು. ಎನ್​ಡಿಆರ್​ಎಫ್ ಮಾರ್ಗಸೂಚಿ ಪ್ರಕಾರ ಪರಿಹಾರ ಕೊಡಲಾಗುವುದು. ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ 10 ರೂ. ಕೂಡ ದುರಪಯೋಗ ಆಗಬಾರದು. ಬೆಳೆಹಾನಿ ಪರಿಹಾರ ಹಣವನ್ನು ಅರ್ಹ ರೈತರಿಗೆ ನೀಡುವುದಾಗಿ ಸಿಎಂ ಬಿಎಸ್​ವೈ ವಿವರಿಸಿದರು.

    ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಆರೋಗ್ಯ ಭಾಗ್ಯದಲ್ಲಿ ಪೊಲೀಸರನ್ನು ಸೇರಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡದಿದ್ದರೆ ಕ್ರಮಕ್ಕೆ ಸೂಚನೆ ನೀಡಲಾಗುವುದು. ಪೊಲೀಸರಿಗೆ ಆರೋಗ್ಯ ರಕ್ಷಣೆ ನೀಡಲು ಸರ್ಕಾರ ಬದ್ಧ ಎಂದರು. ಕಂದಾಯ ಸಚಿವ ಆರ್. ಅಶೋಕ್​ ಉಪಸ್ಥಿತರಿದ್ದರು.

    ಲೇಡಿ ತಹಸೀಲ್ದಾರ್​ಗೆ ಯುವಕರ ಅವಾಜ್​! ವಿಡಿಯೋ ವೈರಲ್​

    ಮಿಸ್ಟರ್ ಡಿಕೆಶಿ, ನೀವು ಜಾಮೀನಿನ ಮೇಲೆ ಹೊರಗಿದ್ದೀರಿ ಎಂಬುದನ್ನ ಅರಿತುಕೊಳ್ಳಿ; ಪ್ರಹ್ಲಾದ್ ಜೋಶಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts