More

    ಒಳ ಮೀಸಲಾತಿ ಜಾರಿಗೆ ಕೇಂದ್ರ ಮಟ್ಟದಲ್ಲಿ ಚಿಂತನೆ

    ಚಿಕ್ಕಮಗಳೂರು: ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ಕುರಿತು ಕೇಂದ್ರ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ಕರ್ನಾಟಕ ಮಾದಿಗ ದಂಡೋರ ಸಂಸ್ಥಾಪಕ ಹಾಗೂ ಬಿಜೆಪಿ ಉಪಾಧ್ಯಕ್ಷ ಎಂ.ಶಂಕರಪ್ಪ ಹೇಳಿದರು.

    ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಮಾದಿಗ ದಂಡೋರ ಸಮಿತಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

    ಈವರೆಗೆ ಸದಾಶಿವ ಆಯೋಗದ ವರದಿ ಜಾರಿ ಮಾಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪರಿಣಾಮ ಎದುರಿಸಿವೆ. ಒಳ ಮೀಸಲಾತಿ ಸಮೀಕ್ಷೆಗೆ ಹಣ ಬಿಡುಗಡೆ ಮಾಡಿದ ಸಿಎಂ ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯಾಧ್ಯಕ್ಷರು ಅದನ್ನು ಅನುಷ್ಠಾನಗೊಳಿಸುವ ಭರವಸೆ ನೀಡಿದ್ದಾರೆ ಎಂದರು.

    40 ವರ್ಷಗಳಿಂದ ಮಾದಿಗ ಸಮಾಜದ ಅಭಿವೃದ್ಧಿಗಾಗಿ ಹೋರಾಟ ನಡೆಸಿದ ಶಂಕರಪ್ಪ ಬಿಜೆಪಿ ಸೇರುವ ಮೂಲಕ ಮಾದಿಗ ಸಮುದಾಯವನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಸತ್ಯಕ್ಕೆ ದೂರ. ತುಳಿತಕ್ಕೆ ಒಳಗಾಗಿರುವವರಿಗೆ ನ್ಯಾಯ ದೊರಕಿಸಿಕೊಡಲು ಬಿಜೆಪಿ ಸೇರಿದ್ದೇನೆ. ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರು ನೀಡಿರುವ ಭರವಸೆ ಈಡೇರಿಸದಿದ್ದಲ್ಲಿ ಈ ಪಕ್ಷದಲ್ಲಿ ಮುಂದುವರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts