More

    ಕಂಟೇನ್​ಮೆಂಟ್​ ಹೊರತಾಗಿ ಇತರ ವಲಯಗಳಲ್ಲಿ ಏನೇನು ಇರುತ್ತವೆ?

    ಬೆಂಗಳೂರು: ಕೇಂದ್ರ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ತಮ್ಮ ಜಿಲ್ಲೆಗಳಲ್ಲಿ ಜಾರಿಗೆ ತರುವಂತೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಲಾಕ್ ಡೌನ್ ಸಡಿಲ ಮಾಡಲು ಕೇಂದ್ರ ಸರ್ಕಾರ ಸೂಚಿಸಿರುವ ಮಾರ್ಗ ಸೂಚಿಗಳ ಬಗ್ಗೆ ಸಿಎಂ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.

    ಕಂಟೇನ್​ಮೆಂಟ್​ ವಲಯಗಳನ್ನು ಹೊರತುಪಡಿಸಿ, ಉಳಿದ ವಲಯಗಳಲ್ಲಿ ಮಾರ್ಗಸೂಚಿ ಅನ್ವಯ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಬೇಕು.

    ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಬೇಕು.

    ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳ ಬಯಸಿರುವ ವಲಸೆ ಕಾರ್ಮಿಕರಿಗೆ ಕೆಎಸ್ಆರ್​ಟಿ ಸಿ ಬಸ್ ಗಳಲ್ಲಿ ಒಂದು ಕಡೆಯ ದರ ಪಾವತಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು. ಹೊರ ಜಿಲ್ಲೆಗಳಿಂದ ಆಗಮಿಸಿದವರನ್ನು ಕಟ್ಟುನಿಟ್ಟಾಗಿ ಮನೆಯಲ್ಲೇ ಕ್ವಾರಂಟೈನ್ ಮಾಡುವಂತೆ ತಿಳಿಸಿದರು.

    ಲಾಕ್ ಡೌನ್ ಸಂದರ್ಭದಲ್ಲಿ ಬೇರೆ ಊರಿನಲ್ಲಿ ಸಿಲುಕಿಕೊಂಡವರು ತಮ್ಮ ಊರಿಗೆ ಅಥವಾ ಕೆಲಸದ ಸ್ಥಳಗಳಿಗೆ ಹಿಂತಿರುಗಲು ಒಂದು ದಿನಕ್ಕೆ, ಒಂದು ಬಾರಿಗೆ ಪ್ರಯಾಣಿಸಲು ಅಂತರ ಜಿಲ್ಲೆಗೆ ಪ್ರಯಾಣಕ್ಕೆ ಪಾಸ್ ನೀಡುವಂತೆ ಸಿಎಂ ಹೇಳಿದರು.

    ನೇಕಾರರ ಸಮಸ್ಯೆಗಳು ಅಧಿಕವಾಗಿದ್ದು, ಅವುಗಳ ಪರಿಹಾರಕ್ಕೆ ಶೀಘ್ರವೇ ಪ್ರತ್ಯೇಕ ಸಭೆ ಕರೆಯಲಾಗುವುದು ಎಂದು ಸಿಎಂ ಇದೇ ವೇಳೆ ತಿಳಿಸಿದ್ದಾರೆ.

    ವಿಜಯಪುರ, ಬೆಳಗಾವಿ, ಬಾಗಲಕೋಟೆ, ಮೈಸೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

    ಮುಂಬೈನಿಂದ ಶವ ತಂದು ಅಂತ್ಯಕ್ರಿಯೆ ಮಾಡಿದ ಪ್ರಕರಣ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಸಚಿವ ಸಿ.ಎಸ್​. ಪುಟ್ಟರಾಜು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts