More

    ಆಂಧ್ರ ಮಾದರಿಯಲ್ಲಿ ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪಿಸಿ – ಲಕ್ಷ್ಮೀ ಹೆಬ್ಬಾಳ್ಕರ್

    ಬೆಳಗಾವಿ: ಆರ್ಥಿಕವಾಗಿ ಸಂಕಷ್ಟದಲ್ಲಿರುವ ದೇವಾಂಗ ಸಮಾಜದ ನೆರವಿಗೆ ಸರ್ಕಾರ ತುರ್ತಾಗಿ ಧಾವಿಸಬೇಕು. ಸಮಾಜದ ಅಭಿವೃದ್ಧಿಗೆ ನಿಗಮ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬೆಂಗಳೂರಿನಲ್ಲಿ ಸೋಮವಾರ ಮನವಿ ಸಲ್ಲಿಸಿದ್ದಾರೆ.

    ರಾಜ್ಯದಲ್ಲಿ ಸುಮಾರು 30 ಲಕ್ಷಕ್ಕೂ ಅಧಿಕ ದೇವಾಂಗ ಜನರಿದ್ದಾರೆ. ಈ ಸಮಾಜವು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ತೀರಾ ಹಿಂದುಳಿದಿದೆ. ಕರೊನಾ ಸಂದರ್ಭದಲ್ಲಿ ಮತ್ತು ಕಳೆದ 2 ವರ್ಷ ಸಂಭವಿಸಿದ್ದ ಪ್ರವಾಹದಿಂದಾಗಿ ಉದ್ಯೋಗ ಮಾಡಲೂ ಆಗದೆ, ನೇಯ್ದ ಬಟ್ಟೆಗಳಿಗೆ ಮಾರುಕಟ್ಟೆಯೂ ಸಿಗದೆ ಪರದಾಡುವಂತಾಗಿದೆ. ಹಾಗಾಗಿ ಸರ್ಕಾರ ಅವರ ನೆರವಿಗೆ ಬರಬೇಕು ಎಂದು ಕೋರಿದ್ದಾರೆ.

    ನೇಕಾರರಿಗೆ ಸರ್ಕಾರದಿಂದ ಯಾವುದೇ ರೀತಿಯ ಮೀಸಲಾತಿಯಾಗಲೀ ಅಥವಾ ಇನ್ನಿತರ ಸೌಲಭ್ಯಗಳಿಲ್ಲ. ಈ ಹಿಂದೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ದೇವಾಂಗ ಸಮಾಜಕ್ಕೆ ಮೀಸಲಾತಿಯಿತ್ತು. ಆದರೆ, ನಾಲ್ಕೈದು ವರ್ಷದ ಹಿಂದೆ ಅದನ್ನು ರದ್ದುಗೊಳಿಸಲಾಗಿದೆ.

    ಹೀಗಾಗಿ ದೇವಾಂಗ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಅವರು ಸರ್ಕಾರದ ನೆರವು ಕೇಳುತ್ತಿರುವುದು ನ್ಯಾಯಬದ್ಧವಾಗಿದೆ. ಅವರ ಮನವಿ ಪುರಸ್ಕರಿಸಿ, ಆಂಧ್ರ ಪ್ರದೇಶದ ಮಾದರಿಯಲ್ಲಿ ದೇವಾಂಗ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪಿಸಬೇಕು ಎಂದು ಮನವಿ ಪತ್ರ ಸಲ್ಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts