More

    ಒಂದೇ ವೇದಿಕೆಯಲ್ಲಿದ್ದರೂ ಒಬ್ಬರಿಗೊಬ್ಬರು ಮುಖ ನೋಡದ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಈಶ್ವರಪ್ಪ!

    ದಾವಣಗೆರೆ: ಸಿಎಂ ಯಡಿಯೂರಪ್ಪ ಹಾಗೂ ಸಚಿವ ಈಶ್ವರಪ್ಪ ಅವರ ಮುನಿಸು ಇನ್ನೂ ತಣ್ಣಗಾಗಿರುವಂತೆ ಕಂಡಿಲ್ಲ. ಈ ಇಬ್ಬರೂ ನಾಯಕರು ಇಂದು ಒಂದೇ ವೇದಿಕೆಯಲ್ಲಿದ್ದರೂ ಒಬ್ಬರಿಗೊಬ್ಬರು ಮುಖ ನೋಡದ ಘಟನೆ ನಡೆದಿದೆ.

    ದಾವಣಗೆರೆ ಜಿಲ್ಲೆಯ ಕನಕಗುರುಪೀಠದ ಬೆಳ್ಳೋಡಿ ಶಾಖಾ ಮಠದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಇಬ್ಬರೂ ಭಾಗವಹಿಸಿದ್ದರು. ಆದರೆ, ಸೌಹಾರ್ದಕ್ಕೂ ಪರಸ್ಪರ ಮಾತನಾಡದೇ ತಮ್ಮ ನಡುವೆ ಎದ್ದಿರುವ ಮುನಿಸು ಇನ್ನೂ ತಣ್ಣಗಾಗಿಲ್ಲ ಎಂಬುದನ್ನು ಬಹಿರಂಗ ಮಾಡಿದರು.

    ಇದನ್ನೂ ಓದಿ: ಪಬ್​ಜಿ ಆಟವಾಡುತ್ತಲೇ ಬಾಲಕನ ಭೀಕರ ಹತ್ಯೆ! ಬೆಚ್ಚಿಬೀಳಿಸುತ್ತೆ ಆರೋಪಿ ಬಾಯ್ಬಿಟ್ಟ ರಹಸ್ಯ

    ಸಿಎಂ ಯಡಿಯೂರಪ್ಪ ಅವರು ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಕೆಎಸ್ ಈಶ್ವರಪ್ಪ ಅವರು ಇತ್ತೀಚೆಗೆ ರಾಜ್ಯಪಾಲರಿಗೆ ಹಾಗೂ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದೂರು ನೀಡಿದ್ದರು. ಈ ದೂರಿನ ನಂತರ ಯಡಿಯೂರಪ್ಪ ಅವರು ಈಶ್ವರಪ್ಪ ವಿರುದ್ಧ ಮುನಿಸಿಕೊಂಡಿದ್ದರು.

    ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ಕನಕ ಗುರುಪೀಠದ ಹೊಸದುರ್ಗ ಶಾಖಾ ಮಠದಲ್ಲಿ ದೇಶದ ಅತಿ ಎತ್ತರದ, ಕನಕದಾಸರ ಏಕಶಿಲಾ ವಿಗ್ರಹ ಸ್ಥಾಪನೆಗೆ 5 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು. ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದಿಂದ ನನೆಗುದಿಗೆ ಬಿದ್ದಿರುವ ಕಾಮಗಾರಿಗಳಿಗಾಗಿ ಆದಷ್ಟು ಶೀಘ್ರ 30 ಕೋಟಿ ರೂ. ನೀಡುವುದಾಗಿ ತಿಳಿಸಿದರು.

    ಬೀದಿಯಲ್ಲಿ ಮಸ್ತ್​ ಡ್ಯಾನ್ಸ್​ ಮಾಡಿದ ನಟಿ ಸುಹಾಸಿನಿ ಹಾಗೂ ಅಕ್ಷರಾ ಹಾಸನ್​

    ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಏ.6 ರಂದು ಪ್ರಧಾನಿ ಮೋದಿ ಮಾತು: ಕಾರಣ ಏನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts