ಸಿಎಂ ಯೋಗಿ ಆದಿತ್ಯನಾಥ್​ಗೆ​ ಕೊಲೆ ಬೆದರಿಕೆ; FIR ದಾಖಲು

dk - 2025-03-05T163505.469
Published on

FIR:ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಸ್ಫೋಟಿಸುವುದಾಗಿ(ಕೊಲೆ) ಬೆದರಿಕೆ ಹಾಕುವ ವಿಡಿಯೋವೊಂದನ್ನು ಪೋಸ್ಟ್​ ಮಾಡಿದ ಆರೋಪ ಮೇಲೆ ವ್ಯಕ್ತಿ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಗ್ರೂಪ್‌ನ ಸದಸ್ಯರೊಬ್ಬರು ಆಪಾದಿತ ವೀಡಿಯೊವನ್ನು ಪೋಸ್ಟ್ ಮಾಡಿದ ನಂತರ ವಾಟ್ಸಾಪ್ ಗ್ರೂಪ್ "ಸನಾತನ ಧರ್ಮ ಸರ್ವೋಪರಿ" ನ ಅಡ್ಮಿನ್ ಅಭಿಷೇಕ್ ದುಬೆ ಅವರು ನೀಡಿದ ದೂರಿನ ಮೇರೆಗೆ ಗೌರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.​

ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ ಎಂದು ವರದಿ ಉಲ್ಲೇಖಿಸಲಾಗಿದೆ.

ಆರೋಪಿ ವಿರುದ್ಧ ಐಟಿ ಕಾಯಿದೆಯ ಸೆಕ್ಷನ್ 353 (1) (ಸಾರ್ವಜನಿಕ ಕಿಡಿಗೇಡಿತನದ ಹೇಳಿಕೆ), 351 (4) (ಕ್ರಿಮಿನಲ್ ಬೆದರಿಕೆ) ಮತ್ತು 66 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net