Girls Hostel : ಹೈದರಬಾದ್ ಉಪನಗರ ಮೇಡ್ಚಲದ ಸಿಎಂಆರ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉದ್ವಿಗ್ನ ಸ್ಥಿತಿ ಮುಂದುವರಿದಿದೆ. ವಿದ್ಯಾರ್ಥಿನಿಯರ ಹಾಸ್ಟೆಲ್ ಬಾತ್‌ರೂಮ್‌ನಲ್ಲಿ ಕ್ಯಾಮೆರಾ ಅಳವಡಿಸಿ ವಿಡಿಯೋ ರೆಕಾರ್ಡ್ ಮಾಡಲಾಗಿದೆ ಎಂಬ ಆರೋಪ ಇದೀಗ ಭಾರಿ ಸಂಚಲನ ಮೂಡಿಸಿದೆ. ಈ ವಿಚಾರವಾಗಿ ನಿನ್ನೆ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಬಾತ್‌ರೂಮ್‌ನಲ್ಲಿ ಸ್ನಾನ ಮಾಡುತ್ತಿರುವ ವೇಳೆ ಫೋನ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಲಾಗುತ್ತಿದೆ ಎಂಬ ಶಂಕೆ ವ್ಯಕ್ತವಾಗಿದೆ.
ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ವಿದ್ಯಾರ್ಥಿ ಸಂಘಟನೆಗಳು ಬೆಂಬಲ ನೀಡಿವೆ. ಎಸ್‌ಎಫ್‌ಐ ಮತ್ತು ಎಬಿವಿಪಿ ವಿದ್ಯಾರ್ಥಿ ಮುಖಂಡರು ಕಾಲೇಜು ಎದುರು ಪ್ರತಿಭಟನೆ ನಡೆಸಿದರು. ಕದ್ದು ವಿಡಿಯೋ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು. ಇಲ್ಲವಾದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಹಾಸ್ಟೆಲ್‌ನಲ್ಲಿರುವ ಅಡುಗೆ ಸಿಬ್ಬಂದಿ ಮೇಲೆ ವಿದ್ಯಾರ್ಥಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಶಂಕಿತರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಹಾಸ್ಟೆಲ್ ಸಿಬ್ಬಂದಿ ವಿರುದ್ಧ ವಿದ್ಯಾರ್ಥಿನಿಯರು ಹಲವು ಆರೋಪಗಳನ್ನು ಮಾಡಿದ್ದಾರೆ. ಅಲ್ಲದೆ, ರಾತ್ರಿ ಸಮಯದಲ್ಲಿ ಹುಡುಗರು ವಿದ್ಯಾರ್ಥಿನಿಯರ ಹಾಸ್ಟೆಲ್ ಕಡೆಗೆ ಬರುತ್ತಿದ್ದಾರೆ ಎಂದು ದೂರಿದ್ದಾರೆ.
ಇದನ್ನು ಓದಿ: ಹೊಸ ವರುಷ ಸಿಡ್ನಿಯಲ್ಲಿ ಗೆದ್ದರಷ್ಟೇ ಹರುಷ; ಭಾರತಕ್ಕೆ ಸರಣಿ ಸಮಬಲ, ಟ್ರೋಫಿ ಉಳಿಸಿಕೊಳ್ಳಲು ಜಯ ಅಗತ್ಯ
ಅಲ್ಲದೇ ಹಾಸ್ಟೆಲ್‌ನಲ್ಲಿ ಸೂಕ್ತ ಭದ್ರತೆ ಇಲ್ಲ ಎಂದು ಹೇಳಿದ್ದಾರೆ. ಲೇಡಿಸ್ ಹಾಸ್ಟೆಲ್ ಮತ್ತು ಅಡುವೆ ಸಹಾಯಕರ ಸ್ಥಳದ ನಡುವೆ ಯಾವುದೇ ತಡೆಗೋಡೆ ಇಲ್ಲ. ಈ ಘಟನೆ ಬಗ್ಗೆ ದೂರು ನೀಡಿದರೆ ನಮ್ಮದೇ ತಪ್ಪು ಎಂದು ಕಾಲೇಜು ಆಡಳಿತ ಮಂಡಳಿ ದೂರುತ್ತದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಸದ್ಯ ಈ ಪ್ರಕರಣದಲ್ಲಿ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ಸೆಲ್‌ಫೋನ್‌ನಲ್ಲಿರುವ ಮಾಹಿತಿ ಆಧರಿಸಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಆ ಗುರುತುಗಳು ಯಾವುವು?
ವಿದ್ಯಾರ್ಥಿನಿಯರ ಹಾಸ್ಟೆಲ್ ಬಾತ್ರೂಮ್ನ ವೆಂಟಿಲೇಟರ್ನಲ್ಲಿರುವ ಕೈ ಗುರುತುಗಳು ಸಾಕಷ್ಟು ಅನುಮಾನ ಮೂಡಿಸಿದೆ. ಹೊರಗಿನಿಂದ ಯಾರೋ ಕ್ಯಾಮೆರಾ ಅಳವಡಿಸಿದಂತೆ ಕನ್ನಡಿಯ ಮೇಲೆ ಗುರುತು ಇದೆ. ಎರಡ್ಮೂರು ಕಡೆ ಕ್ಯಾಮೆರಾ ಅಳವಡಿಸಿರುವ ಶಂಕೆ ವ್ಯಕ್ತವಾಗಿದೆ. ಇದೇ ವೇಳೆ ವಿದ್ಯಾರ್ಥಿಯೊಬ್ಬ ರಾತ್ರಿ ಕ್ಯಾಮರಾ ಕಣ್ಣಿಗೆ ಬಿದ್ದಿದ್ದಾನೆ. ರಾತ್ರಿ ವೇಳೆ ಹಾಸ್ಟೆಲ್ ಕಡೆಗೆ ಹುಡುಗರು ಬರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಾಸ್ಟೆಲ್‌ನಲ್ಲಿ ಸೂಕ್ತ ಭದ್ರತೆ ಇಲ್ಲ ಎಂದು ಹುಡುಗಿಯರ ದೂರಿದ್ದಾರೆ. ಸದ್ಯ ಈ ಪ್ರಕರಣ ಹೈದರಾಬಾದ್ನಲ್ಲಿ ತೀವ್ರ ಸಂಚಲನ ಮೂಡಿಸಿದೆ. (ಏಜೆನ್ಸೀಸ್)
ಈ 3 ರಾಶಿಯವರಿಗೆ ಚಿಕ್ಕ ವಯಸ್ಸಿನಲ್ಲೇ ಮಿಲಿಯನೇರ್ ಆಗುವ ಅದೃಷ್ಟವಿದೆ! ನಿಮ್ಮದು ಇದೇ ರಾಶಿನಾ? Astrology