More

    ಮುಖ್ಯಮಂತ್ರಿ ಪುತ್ರನಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ; ಭರತ್ ಬೊಮ್ಮಾಯಿಗೆ ಟೈಟಾನ್​ ಬಿಸಿನೆಸ್ ಅವಾರ್ಡ್​

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ, ಯುವ ಉದ್ಯಮಿ ಭರತ್ ಬಿ. ಬೊಮ್ಮಾಯಿ ಅವರಿಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿಯಾದ ‘ಟೈಟಾನ್ ಬಿಸಿನೆಸ್ ಅವಾರ್ಡ್- 2022’ ಲಭಿಸಿದೆ.

    ಅಶ್ವ ಎನರ್ಜಿ ಮತ್ತು ವಾಲ್ಟೆಕ್ ಎಂಬ ಸಂಸ್ಥೆಗಳನ್ನು ಮುನ್ನಡೆಸುತ್ತಿರುವ ಭರತ್ ಬಿ. ಬೊಮ್ಮಾಯಿ ಉತ್ಪಾದನೆ ವಿಭಾಗದಲ್ಲಿ ವರ್ಷದ ಜಾಗತಿಕ ವಾಣಿಜ್ಯೋದ್ಯಮಿಯಾಗಿ ಹೊರಹೊಮ್ಮಿದ್ದು 2022ರ ಟೈಟಾನ್ ಬಿಸಿನೆಸ್ ಅವಾರ್ಡ್: ಸೀಸನ್-2ರಲ್ಲಿ ನಿರ್ಣಾಯಕ ವಿಜಯ ಸಾಧಿಸಿದ್ದಾರೆ.

    ವಿಶ್ವಾದ್ಯಂತ ಬಂದಿದ್ದ ಸಾವಿರಾರು ಪ್ರವೇಶಗಳನ್ನು ಪರಿಶೀಲಿಸಿದ ನಂತರ ಸ್ಪರ್ಧೆಯ ತೀರ್ಪುಗಾರರು ಭರತ್ ಬಿ. ಅವರ ಪ್ರವೇಶವನ್ನು (ಗೋಲ್ಡ್) ಟೈಟಾನ್ ಪ್ರಶಸ್ತಿಗೆ ಅರ್ಹರು ಎಂದು ಪರಿಗಣಿಸಿದ್ದಾಗಿ ಟೈಟಾನ್ ಬಿಸಿನೆಸ್ ಅವಾರ್ಡ್ ಆಯೋಜಕರಾದ ಇಂಟರ್​​ನ್ಯಾಷನಲ್​ ಅವಾರ್ಡ್ಸ್ ಅಸೋಸಿಯೇಟ್ (ಐಎಎ) ತಿಳಿಸಿದೆ.

    2022ರ ಟೈಟಾನ್ ಬಿಸಿನೆಸ್ ಅವಾರ್ಡ್ಸ್‌: ಸೀಸನ್-2ರ ಸ್ಪರ್ಧೆಗೆ ಯುಎಸ್ಎ, ಯುನೈಟೆಡ್‌ ಕಿಂಗ್‌ಡಮ್‌, ಆಸ್ಟ್ರೇಲಿಯಾ, ಕೆನಡ, ಚೀನಾ, ಭಾರತ, ಓಮನ್‌, ಫಿಲಿಪೈನ್ಸ್‌, ಪೋರ್ಚುಗಲ್‌, ಯುಎಇ ಸೇರಿ ಸುಮಾರು 55 ದೇಶಗಳಿಂದ ಸಾವಿರಕ್ಕೂ ಹೆಚ್ಚು ಪ್ರವೇಶಗಳು ಬಂದಿದ್ದವು. ವಾಣಿಜ್ಯೋದ್ಯಮಿಗಳು, ಎಸ್​ಎಂಇಗಳು ಮತ್ತು ದೊಡ್ಡ ಸಂಸ್ಥೆಗಳಿಗೆ ಸ್ಪರ್ಧೆ ಮಾಡುವ ಪ್ರವೇಶವನ್ನು ತೆರೆದಿತ್ತು. ಮಾರುಕಟ್ಟೆಯಲ್ಲಿ ಲಭ್ಯವಿದ್ದ ಎಲ್ಲ ಉದ್ಯಮಗಳಿಗೂ ಪ್ರವೇಶ ಮುಕ್ತವಾಗಿ ತೆರೆಯಲಾಗಿತ್ತು.

    ವಿಶ್ವಾದ್ಯಂತ ಇರುವ ಉದ್ಯಮಿ ಮತ್ತು ಸಂಸ್ಥೆಗಳ ಸಾಧನೆಯನ್ನು ಗುರುತಿಸುವ ಏಕಮಾತ್ರ ಉದ್ದೇಶದೊಂದಿಗೆ ಟೈಟಾನ್‌ ಬಿಸಿನೆಸ್‌ ಅವಾರ್ಡ್‌ ನೀಡಲಾಗುತ್ತದೆ. ಸ್ಪರ್ಧಿಗಳನ್ನು ಮಾರುಕಟ್ಟೆಯ ಸಣ್ಣ ಮತ್ತು ದೊಡ್ಡ ಉದ್ಯಮಿಗಳು ಎಂದು ವಿಭಾಗೀಕರಿಸದೆ ಅವರು ಗಳಿಸಿದ ನಿಷ್ಪಕ್ಷಪಾತ ಶ್ರೇಷ್ಠತೆ ಮಟ್ಟದಿಂದ ಮಾತ್ರ ಗೌರವಿಸಲಾಗುತ್ತದೆ. ಈ ಹಂತದಲ್ಲಿ ಅರ್ಹತೆ ಪಡೆದವರು ಮಾತ್ರ ಗೌರವಾನ್ವಿತ ಟೈಟಾನ್​ಗಳಾಗಬಹುದು.

    ಸ್ಪರ್ಧೆಯಲ್ಲಿ ಅನುಭವಿ ವೃತ್ತಿಪರರು ಜ್ಯೂರಿಗಳು ತೀರ್ಪು ನೀಡುವ ಪ್ರಕ್ರಿಯೆಯಲ್ಲಿ ನಿಷ್ಪಕ್ಷಪಾತ ಮತ್ತು ಕಟ್ಟುನಿಟ್ಟಾದ ಮಾನದಂಡಗಳನ್ನು ಅನುಸರಿಸಿದರು. ಅತ್ಯುತ್ಕೃಷ್ಟ ಪ್ರವೇಶಗಳನ್ನು ಗುರುತಿಸಿ ಪ್ರಶಸ್ತಿ ನೀಡುವ ಜವಾಬ್ದಾರಿ ಜ್ಯೂರಿಗಳಿಗೆ ನೀಡಲಾಗಿತ್ತು. ತೀರ್ಪು ನೀಡುವ ಪ್ರಕ್ರಿಯೆಯಲ್ಲಿ ವೈವಿಧ್ಯಮಯ ದೃಷ್ಟಿಕೋನ ಹೊಂದಲು ಟೈಟಾನ್​ ಪ್ರಾಮುಖ್ಯತೆ ನೀಡಿದ್ದು, ಪ್ರವೇಶಗಳ ತೀರ್ಪು ನೀಡಲು 15 ದೇಶಗಳಿಂದ ಸುಮಾರು 27 ಜ್ಯೂರಿಗಳನ್ನು ನೇಮಿಸಲಾಗಿತ್ತು.

    ಈ ಸ್ಪರ್ಧೆಗೆ ಅನೇಕ ಗೌರವಾನ್ವಿತ ಕಂಪನಿಗಗಳು ಪ್ರವೇಶ ಪಡೆದಿದ್ದವು.‌ ಪ್ರತಿಷ್ಠಿತ ಸಂಸ್ಥೆಗಳ ನಡುವೆ ಸ್ಪರ್ಧೆಯ ಎಲ್ಲ ಕಠಿಣ ಹಂತಗಳನ್ನು ದಾಟಿದ ಭರತ್ ಬಿ. ಬೊಮ್ಮಾಯಿ 2022ರ ಟೈಟಾನ್ ಅವಾರ್ಡ್: ಸೀಸನ್-2ರಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ.

    ‘ಎಲ್ರೂ ನನ್ನ ಶವ ನೋಡಲು ಬನ್ನಿ, ಇಲ್ಲಂದ್ರೆ ದೆವ್ವ ಆಗಿ ಬರ್ತೀನಿ’; ಡೆತ್​ನೋಟ್​ನಲ್ಲಿತ್ತು ಈ ಕೊನೇ ಆಸೆ

    ವಾಟ್ಸ್​ಆ್ಯಪ್​ ಬಳಕೆ ಅಪಾಯಕಾರಿಯೇ?; ಇಲ್ಲಿದೆ ಆತಂಕಕಾರಿ ಮಾಹಿತಿ!

    ಕಾಂತಾರ: ಒಂದಕ್ಕೂ ನಾಲ್ಕಕ್ಕೂ ನಡುವೆ ಎಷ್ಟು ಅಂತರ!?; ಬದಲಾಯ್ತು ರಿಷಬ್ ‘ಸ್ಟೇಟಸ್​’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts