ಬೆಂಗಳೂರು: ಯಾವಾಗ ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತದೆಯೋ ಅವಾಗ ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡುತ್ತೇನೆಂಬ ಹೇಳಿಕೆ ನೀಡುವುದು, ಕುರ್ಚಿ ಸ್ವಲ್ಪ ಭದ್ರವಾಗುತ್ತಿದ್ದಂತೆ ಮುಂದೂಡುತ್ತೇವೆ ಎಂಬ ಹೇಳಿಕೆಗಳನ್ನು ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿಗಣತಿ ವರದಿಯನ್ನು ಪಗಡೆಯಾಟ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಎಂದು ಟೀಕಿಸಿದರು.
ಕೆಪಿಎಸ್ಸಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವು ಒಂದೆಡೆ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತಿದೆ. ಮತ್ತೊಂದೆಡೆ, ಜಾತಿ ಗಣತಿ ವಿಚಾರದಲ್ಲಿ ಹುಡುಗಾಟಿಕೆ ಮಾಡುತ್ತಿರುವುದು ಅಕ್ಷಮ್ಯ ಅಪರಾಧ ಎಂದರು.