More

    ಬೆಳಗಾವಿ  ಜಿಲ್ಲೆಯಲ್ಲಿ ಶೇ.74.87 ರಷ್ಟು ದಾಖಲೆ ಮತದಾನ


    ಬೆಳಗಾವಿ:ಪ್ರಜಾಪ್ರಭುತ್ವದ ಹಬ್ಬವಾಗಿರುವ ಚುನಾವಣೆಯು ಶಾಂತಿಯುತವಾಗಿ ನಡೆದಿದ್ದು, ಮೂರು ಲೋಕಸಭಾ ಮತಕ್ಷೇತ್ರಗಳ ವ್ಯಾಪ್ತಿಯನ್ನು ಒಳಗೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟಾರೆ ಶೇ.74.87 ರಷ್ಟು ಮತದಾನವಾಗಿರುತ್ತದೆ.
    ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಶೇ.78.51 ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಶೇ.71.38ರಷ್ಟು ಮತದಾನವಾಗಿರುತ್ತದೆ. ಇದಲ್ಲದೇ ಕೆನರಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬೆಳಗಾವಿ ಜಿಲ್ಲೆಯ ಖಾನಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶೇ.73.87 ಮತ್ತು ಕಿತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ. 76.25 ರಷ್ಟು ಮತದಾನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
    ಕಳೆದ ಬಾರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ‌ 2019 ರಲ್ಲಿ ಶೇ.75.52 ರಷ್ಟು ಮತದಾನವಾಗಿದ್ದರೆ 2024 ರಲ್ಲಿ ಶೇ.78.51 ರಷ್ಟು ಮತದಾನವಾಗುವ ಮೂಲಕ ಪ್ರತಿಶತ 3 ರಷ್ಟು ಹೆಚ್ಚಳವಾಗಿರುತ್ತದೆ.
    ಅದೇ ರೀತಿ‌ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 2019 ರ‌ ಚುನಾವಣೆಯಲ್ಲಿ‌ ಶೇ. 67.70 ರಷ್ಟು‌ ಮತದಾನವಾಗಿತ್ತು. ಈ ಬಾರಿ 2024 ರಲ್ಲಿ ಶೇ.71.38 ರಷ್ಟು ಮತದಾನವಾಗುವ ಮೂಲಕ ಪ್ರತಿಶತ‌ 4 ರಷ್ಟು ಹೆಚ್ಚಳವಾಗಿರುತ್ತದೆ ಎಂದು ನಿತೇಶ್‌ ಪಾಟೀಲ‌ ತಿಳಿಸಿದ್ದಾರೆ.

    ಬೆಳಿಗ್ಗೆ 7 ಗಂಟೆಯಿಂದ ಸಂಜೆ‌ 6 ಗಂಟೆಯವರೆಗೆ ಮತದಾನ ನಡೆಯಿತು. ಕೆಲವು ಕಡೆಗಳಲ್ಲಿ 6  ಗಂಟೆಯ‌ ಒಳಗೆ ಮತಗಟ್ಟೆಯ ಸರದಿಯಲಿದ್ದ ಮತದಾರರಿಗೆ ಟೋಕನ್‌ ವಿತರಿಸಿದ ಬಳಿಕ ಮತದಾನಕ್ಕೆ ಅವಕಾಶ ಕಲ್ಪಿಸಲಾಯಿತು.
    ಜಿಲ್ಲೆಯ ಎಲ್ಲ ಕಡೆಗಳಲ್ಲೂ ಮತದಾನ ಶಾಂತಿಯುತವಾಗಿ ನಡೆದಿರುತ್ತದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts