ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಸಿಎಂ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತೆಯರ ಬಂಧನ

IMG-20250428-WA0060.jpg
Published on

ಬೆಳಗಾವಿ: ಇಲ್ಲಿನ ಸಿಪಿಇಡಿ ಮೈದಾನದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸಂವಿಧಾನ ರಕ್ಷಿಸಿ, ದೇಶ ಉಳಿಸಿ, ಕೇಂದ್ರ ಸರ್ಕಾರದ ಬೆಲೆ ಏರಿಕೆ ಪ್ರತಿಭಟನೆ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿರುವ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪು ಬಟ್ಟೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪು ಬಾವುಟ ಪ್ರದರ್ಶಿಸಿ ದೇಶದ್ರೋಹಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಿಪಡಿಸಿದರು.‌ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಕಾರ್ಯಕರ್ತೆಯರನ್ನು ಬಂಧಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net