More

    ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಸಹಪಠ್ಯ ಪೂರಕ

    ಧಾರವಾಡ: ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪಾಠದ ಜೊತೆ ಆಟವೂ ಪೂರಕ. ಮಕ್ಕಳಲ್ಲಿ ಮೊಬೈಲ್ ಗೀಳು ಬೆಳೆಯದಂತೆ ತಂದೆ- ತಾಯಿ ಎಚ್ಚರಿಕೆ ವಹಿಸಬೇಕು ಎಂದು ಮನೋರೋಗ ತಜ್ಞ ಡಾ. ಆನಂದ ಪಾಂಡುರAಗಿ ಹೇಳಿದರು.
    ನಗರದ ಸಪ್ತಾಪುರದ ವೇಮನ ವಿದ್ಯಾವರ್ಧಕ ಸಂಘದ ಶಾರದಾ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಆರಂಭೋತ್ಸವ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
    ಅಧ್ಯಕ್ಷತೆ ವಹಿಸಿದ್ದ ಡಾ. ಎಸ್.ಎಚ್. ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಲ್ಲಿ ಉತ್ತಮ ನಡೆ- ನುಡಿ, ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕು. ಒಳ್ಳೆಯ ಫಲಿತಾಂಶ ದಾಖಲಿಸಲು ಶಿಕ್ಷಕರು ಪ್ರೇರಣೆ ನೀಡಬೇಕು ಎಂದರು.
    ಸAಸ್ಥೆಯ ಕಾರ್ಯಾಧ್ಯಕ್ಷ ಎಸ್.ಬಿ. ಮುದಿಗೌಡರ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಡಳಿತ ಮಂಡಳಿಯ ಅಧ್ಯಕ್ಷ ಕೆ.ವಿ. ತಿಮ್ಮಾಪೂರ, ಸದಸ್ಯರಾದ ಬಿ.ವಿ. ನವಲಗುಂದ, ಪುಷ್ಪಾ ಯಮನೂರ, ಎ.ಜಿ. ಮುಳ್ಳೂರ, ಮುಖ್ಯಾಧ್ಯಾಪಕರು, ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿ, ಪಾಲಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts