

ಮೂಲ್ಕಿ: ಕರಾವಳಿ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ಬಹಳಷ್ಟು ಅಭಿವೃದ್ಧಿಯಾಗಿದ್ದು, ಸಹಕಾರಿಗಳು ಜತೆಯಾಗಿ ಕೆಲಸ ಮಾಡಲು ಅನುಕೂಲವಾಗಿದೆ ಎಂದು ಪ್ರೊಟೆಸ್ಟೆಂಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷೆ ಶರ್ಮಿಳಾ ಶೆಟ್ಟಿಯಾನ್ ಹೇಳಿದರು.
ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಪ್ರಧಾನ ಕಚೇರಿಗೆ ಭೇಟಿ ನೀಡಿದ ಸಂದರ್ಭ ಮಾತನಾಡಿದರು.
ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್.ವಸಂತ ಬರ್ನಾಡ್ ಅವರು ಶರ್ಮಿಳಾ ಶೆಟ್ಟಿಯಾನ್ ಅವರನ್ನು ಗೌರವಿಸಿದರು. ಯಂಗ್ ಮೆನ್ಸ್ ಕ್ರಿಶ್ಚಿಯನ್ ಅಸೋಸಿಯೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಶಿಪಾಲ್ ಶೆಟ್ಟಿಯಾನ್ ಮತ್ತು ಪ್ರಿಯದರ್ಶಿನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಉಪಸ್ಥಿತರಿದ್ದರು.