More

    ಸಹಕಾರಿ ಸಂಘಗಳಿಂದ ಅಭಿವೃದ್ದಿ ಸಾಧ್ಯ: ಜಿಲ್ಲಾ ಸಹಕಾರ ಯೂನಿಯನ್ ಸಿಇಒ ಅನ್ನಪೂರ್ಣಮ್ಮ ಹೆಮವಾಡಗಿ ಅಭಿಮತ

    ಕವಿತಾಳ: ಮಹಿಳೆಯರ ಅಭಿವೃದ್ದಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನ್ನಪೂರ್ಣಮ್ಮ ಹೆಮವಾಡಗಿ ಹೇಳಿದರು.

    ಸಮೀಪದ ಬಾಗಲವಾಡದಲ್ಲಿ ಸೋಮವಾರ ಮಾರಿಕಾಂಬ ದೇವಸ್ಥಾನ ಆವರಣದಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಮತ್ತು ಬಾಗಲವಾಡ ಕೃಷಿ ಪತ್ತಿನ ಸಹಕಾರ ಸಂಘ, ಮಹಿಳಾ ಸಹಕಾರ ಸಂಘಗಳು ಹಾಗೂ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಮಹಿಳೆಯರಲ್ಲಿ ಸ್ವಾವಲಂಬನೆ ನಾಯಕತ್ವ ಹಾಗೂ ಸಬಲಿಕರಣಕ್ಕಾಗಿ ಸರ್ಕಾರದ ಆರ್ಥಿಕ ಸೌಲಭ್ಯ ಕುರಿತು ಅರಿವು ಮೂಡಿಸುವ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಈ ಆಧುನಿಕ ಯುಗದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.ಪ್ರತಿಯೊಬ್ಬರ ಮಹಿಳೆಯರು ಶಿಕ್ಷಣವಂತರಾಗಬೇಕಿದ್ದು, ಕುಟುಂಬ ನಿರ್ವಹಣೆಯಲ್ಲಿ ಪ್ರಮುಖ ಪಾತ್ರವಹಿಸಬೇಕು. ಸರ್ಕಾರ ನೀಡುವ ಸೌಲಭ್ಯಗಳನ್ನು ಬಳಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದರು.

    ಪಾರಿಜಾತ ಶಿಕ್ಷಣ ಮತ್ತು ವಿವಿಧೋದ್ದೇಶ ಸೇವಾ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ಮಾತನಾಡಿದರು. ಬಾಗಲವಾಡ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಶಂಕರಗೌಡ,ಭಾರತಿಯ ಸಹಕಾರ ಯೂನಿಯನ್ ಸಂಸ್ಥೆಯ ಸಿಬ್ಬಂದಿ ರಾಮಚಂದ್ರ, ಪ್ರಮುಖರಾದ ಶಿವಲೀಲಾ, ಮಂಜುಳಾ, ಅಶ್ವಿನಿ, ಇತರರಿದ್ದರು.

     

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts