

ಬೆಂಗಳೂರು: ಕರೊನಾ ಕಾರಣದಿಂದಾಗಿ ತಡೆಹಿಡಿಯಲ್ಪಟ್ಟಿದ್ದ ಸಹಕಾರ ಸಂಘಗಳು ಹಾಗೂ ಬ್ಯಾಂಕ್ಗಳಿಗೆ ಚುನಾವಣೆ ನಡೆಸಲು ಸರ್ಕಾರ ಅನುಮತಿ ನೀಡಿದೆ. ಈ ಸಂಬಂಧ ಸಹಕಾರ ಇಲಾಖೆಯ ಪ್ರಧಾನ ಕಾರ್ಯದಶಿರ್ಗಳು ಸಹಕಾರ ಚುನಾವಣಾ ಆಯೋಗದ ಆಯುಕ್ತರಿಗೆ ಪತ್ರ ಬರೆದು ತಕ್ಷಣ ಸಹಕಾರ ಸಂಗಳು, ಸಹಕಾರ ಬ್ಯಾಂಕ್ಗಳು ಹಾಗೂ ಸೌಹಾರ್ದ ಸಹಕಾರ ಸಂಗಳಿಗೆ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಕರೊನಾ ಸೋಂಕು ಹೆಚ್ಚಿದ್ದ ಕಾರಣದಿಂದಾಗಿ ಮಾರ್ಚ್ ಅಂತ್ಯದ ತನಕ ಅಥವಾ ಮುಂದಿನ ಆದೇಶದವರೆಗೆ ಯಾವುದೇ ಚುನಾವಣೆ ನಡೆಸದಂತೆ ಸರ್ಕಾರ ಸೂಚನೆ ನೀಡಿತ್ತು. ಆದರೆ ಕೋವಿಡ್ ನಿರ್ಬಂಧಗಳಿಗೆ ಇದೀಗ ವಿನಾಯಿತಿ ನೀಡಿರುವುದರಿಂದ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.