More

    ಸಹಕಾರ ಕಾಯ್ದೆ ಮತ್ತು ಕಾನೂನು ತಿದ್ದುಪಡಿ ಅಧ್ಯಯನ ಸಮಿತಿ ಸಭೆ

    ಮಂಗಳೂರು: ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಮತ್ತು ನಿಯಮಗಳು 1960 ಹಾಗೂ ಕರ್ನಾಟಕ ಸೌಹಾರ್ದ ಸಹಕಾರ ಕಾಯ್ದೆ 1997 ಮತ್ತು ನಿಯಮಗಳು 2004 ಇವುಗಳಿಗೆ ಕಾನೂನಾತ್ಮಕ ತಿದ್ದುಪಡಿ ತರುವ ಸಂಬಂಧ ರಚಿಸಿರುವ ಅಧ್ಯಯನ ಸಮಿತಿ ಪ್ರಥಮ ಸಭೆ ವಿಧಾನಸೌಧದಲ್ಲಿ ಬುಧವಾರ ನಡೆಯಿತು.

    ಸಹಕಾರ ಸಚಿವ ಕೆ.ಎನ್.ರಾಜಣ್ಣ, ಶಾಸಕ ಲಕ್ಷ್ಮಣ ಸಂಗಪ್ಪ ಸವದಿ, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ.ದೇವೇಗೌಡ, ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಬೀಳಗಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಎಸ್.ಆರ್. ಪಾಟೀಲ್, ಶಾಸಕರಾದ ಅರೆಬೈಲ್ ಶಿವರಾಮ್ ಹೆಬ್ಬಾರ್, ಷಡಕ್ಷರಿ, ಎಂಎಲ್‌ಸಿ ರಾಜೇಂದ್ರ ರಾಜಣ್ಣ, ಸಹಕಾರ ಸಂಘಗಳ ನಿಬಂಧಕ ಕ್ಯಾ.ಡಾ.ಕೆ.ರಾಜೇಂದ್ರ, ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಎಂ.ಡಿ. ನರಸಿಂಹಮೂರ್ತಿ, ಸಹಕಾರ ಸಂಘಗಳ ನಿವೃತ್ತ ಅಪರ ನಿಬಂಧಕ ಜಿ.ಎಸ್.ರಮಣರೆಡ್ಡಿ, ಸಹಕಾರ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಎ.ಸಿ. ದಿವಾಕರ್, ಸಹಕಾರ ಅಪರ ನಿಬಂಧಕರಾದ ಕೆ.ಎಂ.ಆಶಾ, ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್. ನವೀನ್, ಕಾರ್ಯದರ್ಶಿ ಲಕ್ಷ್ಮೀಪತಯ್ಯ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts