More

    ನಿರ್ದಿಷ್ಟ ಗುರಿಯೊಂದಿಗೆ ನಡೆದರೆ ಯಶಸ್ಸು: ಜಿಲ್ಲಾಧಿಕಾರಿ ಡಾ.ಕುಮಾರ ಕಿವಿಮಾತು

    ಮಂಡ್ಯ: ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಒಳ್ಳೆಯ ಗುರಿ ಹೊಂದಿರುವುದು ಮುಖ್ಯವಾಗಿರುತ್ತದೆ. ಅಂತೆಯೇ ಅದೇ ದಾರಿಯಲ್ಲಿ ನಡೆದರೆ ಯಶಸ್ಸು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
    ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ಸಿದ್ಧತೆ ಬಗ್ಗೆ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಕೆಪಿಎಸ್‌ಸಿಯಲ್ಲಿ 380 ಹುದ್ದೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಆದ್ದರಿಂದ ಪ್ರತಿ ಅಭ್ಯರ್ಥಿಯು ದೃಢಸಂಕಲ್ಪ ಹಾಗೂ ಆತ್ಮ ವಿಶ್ವಾಸದಿಂದ ಸದುಪಯೋಗವನ್ನು ಪಡೆದುಕೊಳ್ಳಲು ಒಳ್ಳೆಯ ಅವಕಾಶವಾಗಿದೆ. ಸಮಯ ಎನ್ನುವುದು ಯಾರಿಗಾಗಿಯೂ ಕಾಯುವುದಿಲ್ಲ. ಒಳ್ಳೆಯ ಸಮಯದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಪ್ರತಿ ವಿದ್ಯಾರ್ಥಿಯೂ ಕೂಡ ತಮ್ಮ ಮೇಲೆ ನಂಬಿಕೆ ಇಡಬೇಕು. ಶಿಸ್ತು, ಭಕ್ತಿ, ಸಮರ್ಪಣೆ ಮನೋಭಾವನೆ ಅಂಶಗಳನ್ನು ಹೊಂದಿದ್ದರೆ, ಯಾವುದೇ ಕೆಲಸಲ್ಲೂ ಕೂಡ ಯಶಸ್ಸು ಸಿಗುತ್ತದೆ. ಯಾವಾಗಲೂ ಧನಾತ್ಮಕ ಚಿಂತನೆ ಹೊಂದಿರಬೇಕು ಎಂದು ಅಭಿಪ್ರಾಯಪಟ್ಟರು.
    ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯಾದರೂ ಅಭ್ಯರ್ಥಿಗಳಿಗೆ ಮಾರ್ಗದರ್ಶನ ಎನ್ನುವುದು ಬಹಳ ಮುಖ್ಯ. ಅಭ್ಯರ್ಥಿಗಳು ಒಳ್ಳೆಯ ಮಾರ್ಗದರ್ಶನದೊಂದಿಗೆ ಹುದ್ದೆಯನ್ನು ಪಡೆದುಕೊಳ್ಳಬೇಕು. ಪರೀಕ್ಷಾರ್ಥಿಗಳು ಓದಿನ ಸಮಯದಲ್ಲಿ ಆಗುವ ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕು. ಸೋಮಾರಿತನವನ್ನು ದೂರ ಮಾಡಿ, ಹೆಚ್ಚಿನ ಶ್ರಮವಹಿಸಿ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿ ಯಶಸ್ವಿಯಾಗಬೇಕು ಎಂದರು.
    ಸಂಪನ್ಮೂಲ ವ್ಯಕ್ತಿಗಳಾದ ಡಾ.ಹೇಮಚಂದ್ರ ಹಾಗೂ ವಿಶ್ವನಾಥ್ ಉಪನ್ಯಾಸ ನೀಡಿದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿದ್ದಲಿಂಗೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀನಿವಾಸ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts