Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಬೆಳವಣಿಗೆಗಳನ್ನು ನೋಡಿಕೊಂಡು ಬಿಜೆಪಿ ಸೇರುವ ನಿರ್ಧಾರ ಮಾಡುವುದಾಗಿ ಹೇಳಿದ ಶಾಸಕ

Tuesday, 18.09.2018, 11:17 AM       No Comments

ಕೋಲಾರ: ಮೈತ್ರಿ ಸರ್ಕಾರದಲ್ಲಿ ಬೆಳವಣಿಗೆಗಳನ್ನು ನೋಡಿಕೊಂಡು ನಂತರ ಆಪರೇಷನ್​ ಕಮಲದ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದು ಮುಳಬಾಗಿಲು ಪಕ್ಷೇತರ ಶಾಸಕ ಎಚ್​.ನಾಗೇಶ್​ ಹೇಳಿದರು.

ಕಾಂಗ್ರೆಸ್​, ಜೆಡಿಎಸ್​ ಮೈತ್ರಿ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಾಗೇಶ್​, ಮಂತ್ರಿ ಸ್ಥಾನ ಕೊಡುವ ವಿಚಾರದಲ್ಲಿ ಸರ್ಕಾರ ಕುಂಟುನೆಪ ಹೇಳಿದೆ. ಇದರಿಂದ ಸರ್ಕಾರದ ಬಗ್ಗೆ ನನಗೆ ಅಸಹ್ಯ ಮೂಡಿದೆ. ನನ್ನ ದಾರಿ ತಪ್ಪಿಸಿ ಮೋಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ತಾಲೂಕಿನ ಮುಖಂಡರ ಅಭಿಪ್ರಾಯ ಪಡೆದು ಬಿಜೆಪಿಗೆ ಸೇರುವ ಬಗ್ಗೆ ನಿರ್ಧಾರ ಮಾಡುತ್ತೇನೆ. ಸಮ್ಮಿಶ್ರ ಸರ್ಕಾರ ನನ್ನ ಬೆಂಬಲ ತೆಗೆದುಕೊಂಡು ಪ್ರತಿಫಲ ನೀಡದೆ ಕೈಕೊಟ್ಟಿದೆ. ಬೆಣ್ಣೆ ಮಾತುಗಳನ್ನಾಡಿ, ತಮ್ಮ ಕೆಲಸವಾದ ಮೇಲೆ ಸುಮ್ಮನಿರುವ ಮುಖಂಡರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದರು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top