ಸಮ್ಮಿಶ್ರ ಸರ್ಕಾರ ಅಲ್ಪಾಯುಷಿ

ಚಿಕ್ಕೋಡಿ: ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಹೆಚ್ಚು ದಿನದ ಆಯುಷ್ಯವಿಲ್ಲ. ಇದು ಪೂರ್ಣಾವಧಿ ಜೀವಿಸುವುದಿಲ್ಲ. ಸರ್ಕಾರ ಯಾವುದೇ ಕ್ಷಣದಲ್ಲಿ ಬೀಳಲಿದೆ ಎಂದು ವಿಧಾನಪರಿಷತ್‌ನಲ್ಲಿ ಪ್ರತಿಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಭವಿಷ್ಯ ನುಡಿದಿದ್ದಾರೆ.

ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ದೂದಗಂಗಾ ಶುಗರ್ ನಿರ್ದೇಶಕರು ನಿಪ್ಪಾಣಿಯ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ಸಂಸ್ಥಾಪಕ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಬಿಜೆಪಿ ಪ್ರಾಬಲ್ಯ ಹೆಚ್ಚುತ್ತಿದೆ. ಕಳೆದ ಎರಡು ಚುನಾವಣೆಗಳ ಲಿತಾಂಶ ಇದನ್ನು ಸಾಬೀತುಪಡಿಸಿದೆ ಎಂದರು.

ರಾಯಬಾಗ ಶಾಸಕ ಡಿ.ಎಂ.ಐಹೊಳೆ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಎಂಎಲ್‌ಸಿ ಮಹಾಂತೇಶ ಕವಟಗಿಮಠ ಅವರಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ನೇಮಿಸಿ ಹೆಚ್ಚಿನ ಜವಾಬ್ದಾರಿ ವಹಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ಅವರ ಹೋರಾಟಕ್ಕೆ ಪ್ರೋತ್ಸಾಹ ಸಿಕ್ಕಿದೆ ಎಂದರು.