ಬರುವ ಜನವರಿ ಮೊದಲ ವಾರದಲ್ಲಿ ಕರಾವಳಿ ಉತ್ಸವ

Karavali-utsav-meeting
Published on

ಕಾರವಾರ: ಕರಾವಳಿ ಉತ್ಸವ ನಡೆಸುವ ಸಂಬಂಧ ಮೊದಲ ಪೂರ್ವಭಾವಿ ಸಭೆ ಶುಕ್ರವಾರ ಜಿಲ್ಲಾಧಿಕಾರಿ ಗಂಗೂಬಾಯಿ ಅಧ್ಯಕ್ಷತೆಯಲ್ಲಿ ನಡೆದಿದೆ. ಕಳೆದ ಮೂರು ವರ್ಷಗಳಿಂದ ಉತ್ಸವ ನಡೆದಿರಲಿಲ್ಲ.
ಟ್ಯಾಗೋರ್ ಕಡಲ ತೀರದಲ್ಲಿ 2024 ರ ಜನವರಿ ಮೊದಲ ವಾರದಲ್ಲಿ ಕರಾವಳಿ ಉತ್ಸವವನ್ನು ವೈಭವದಿಂದ ನಡೆಸಲು ತೀರ್ಮಾನಿಸಲಾಗಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಡಿಸಿ ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉತ್ಸವವನ್ನು ಜನಾಕರ್ಷಕವಾಗಿ ನಡೆಸುವ ಕುರಿತು ಮತ್ತು ಸಂಸ್ಕೃತಿಕ ಕಾರ್ಯಕ್ರಮ ದಲ್ಲಿ ಸ್ಥಳೀಯ ಪ್ರತಿಭಾನ್ವಿತ ಕಲಾವಿದರಿಗೂ ಅವಕಾಶ ನೀಡುವ ಸಂಬಂಧ ಯೋಜಿಸಬೇಕಿದೆ ಎಂದರು. ಸ್ಥಳಿಯ ಕ್ರೀಡಾಪಟುಗಳಿಗೆ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ, ವಸ್ತು ಪ್ರದರ್ಶನ ಏರ್ಪಡಿಸುವುದು, ಕಾರ್ಯಕ್ರಮಕ್ಕೆ ಬೇಕಾದ ಅನುದಾನ ತರುವುದು, ಕಾರ್ಯಕ್ರಮದ ಸಮಗ್ರ ರೂಪುರೇಷೆಗಳ ಬಗ್ಗೆ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.

ಇದನ್ನೂ ಓದಿ: ಡಿಎಆರ್‌ ತಂಡ ಸಮಗ್ರ ವೀರಾಗ್ರಣಿ
ಜಿಲ್ಲಾ ಮಟ್ಟದ ಕಾರ್ಯಕ್ರಮವಾಗಿರುವುದರಿಂದ ಸ್ಥಳೀಯ ಸಂಸ್ಕೃತಿಕ ಕಾರ್ಯಕ್ರಮ, ಕ್ರೀಡಾ ಕೂಟ, ಇತರೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಜಿಲ್ಲೆಯ ಎಲ್ಲಾ ತಾಲೂಕಿನವರು ಸ್ಪರ್ಧೆಯಲ್ಲಿ ಭಾಗವಹಿಸಲು ಮತ್ತು ಸ್ಥಳೀಯರ ಜತೆ ಹೊರ ಜಿಲ್ಲೆ, ರಾಜ್ಯ, ಪ್ರವಾಸಿಗರನ್ನು ಆಕರ್ಷಿಸುವ ರೀತಿಯಲ್ಲಿ ಕಾರ್ಯಕ್ರಮ ರೂಪಿಸಿ, ಈ ಉತ್ಸವದ ಮೂಲಕ ಜಿಲ್ಲೆಯ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಽಕಾರಿ ಪ್ರಕಾಶ್ ರಜಪೂತ, ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯ್ಕೋಡ್, ಡಾ. ನಯನಾ, ಕಲ್ಯಾಣಿ ಕಾಂಬ್ಳೆ, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಽಕಾರಿ ಸತೀಶ್ ಪವಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net