ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಶುಕ್ರವಾರವೂ ಮುಂದುವರಿದಿದೆ. ಚಿಕ್ಕಮಗಳೂರಿನ ಮೂಡಗೆರೆ, ದಕ್ಷಿಣ ಕನ್ನಡದ ಮಂಗಳೂರು, ಕೊಡಗಿನ ಗೋಣಿಕೊಪ್ಪ, ಮಂಡ್ಯ, ಶಿವಮೊಗ್ಗದ ಆಗುಂಬೆ ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಭರ್ಜರಿ ವರ್ಷಧಾರೆಯಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ 29ರಿಂದ ಜು.2ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅರ್ಲಟ್ ನೀಡಲಾಗಿದೆ. ಮಲೆನಾಡು, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕೃಷಿ ಇಲಾಖೆಯಲ್ಲಿ ಬಿದಿರು ವಸ್ತುಗಳ ಪ್ರದರ್ಶನ
ಇಲಾಖೆ ಹಿರಿಯ ಅಧಿಕಾರಿ ಸಿ.ಎಸ್.ಪಾಟೀಲ್ ಮಾತನಾಡಿ, ಪ್ರಸಕ್ತ ತಿಂಗಳಲ್ಲಿ ವಾಡಿಕೆಯಷ್ಟೇ ಮಳೆ ಸುರಿದಿದೆ. ಉತ್ತರ ಮತ್ತು ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾದರೆ, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವಾಡಿಕೆಗಿಂತ ತುಸು ಕಡಿಮೆ ಪ್ರಮಾಣದಲ್ಲಿ ಸುರಿದಿದೆ. ಆದರೆ, ಒಂದು ವಾರದಿಂದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ವಾಡಿಕೆಯಷ್ಟೇ ವರ್ಷಧಾರೆಯಾಗಿರುವುದು ಗಮನಾರ್ಹ. ಮುರ್ನಾಲ್ಕು ದಿನಗಳಿಂದ ಕರಾವಳಿ ಭಾಗದಲ್ಲಿ ಮಳೆ ಅಬ್ಬರ ಜೋರಾಗಿದೆ. ಆದರೆ. ಉಳಿದ ಭಾಗಗಳಲ್ಲಿ ಜೂ 29ರಿಂದ ಮುಂದಿನ 5 ದಿನಗಳ ಕಾಲ ಮಳೆ ಇಳಿಮುಖವಾಗಲಿದೆ ಎಂದು ಮಾಹಿತಿ ನೀಡಿದರು.