ಮನೆ ಮೇಲೆ ಉರುಳಿದ ತೆಂಗಿನ ಮರ

ವಿರಾಜಪೇಟೆ: ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಸುರಿದ ಗಾಳಿಮಳೆಗೆ ಮನೆ ಮೇಲೆ ತೆಂಗಿನ ಮರ ಬಿದ್ದು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.

ಸಂಜೆ 6 ಗಂಟೆ ಸುಮಾರಿಗೆ ಶುರುವಾದ ಬಾರಿ ಗಾಳಿಗೆ ಬಿಟ್ಟಂಗಾಲದ ಈರಯ್ಯ ಎಂಬುವರ ಮನೆ ಮೇಲೆ ತೆಂಗಿನ ಮರ ಬಿದ್ದಿದೆ. ಈ ವೇಳೆ ಈರಯ್ಯ ಅವರ ಪತ್ನಿ ಹಾಗೂ ಪುತ್ರ ದಿನೇಶ್ ಮನೆಯಲ್ಲಿಯೇ ಇದ್ದರು. ದಿನೇಶ್ ಅವರ ತಲೆಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ರೆವಿನ್ಯೂ ಇನ್ಸಪೆಕ್ಟರ್ ಪಳಂಗಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *