ಬ್ಯಾಡಗಿ: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಬಸವರಾಜ ಕೃಷ್ಣಪ್ಪ ದೇವಿಹೊಸೂರ ಮೃತ ವ್ಯಕ್ತಿ.
ಈತ ತೆಂಗಿನಮರ ಹತ್ತಿ ಕಾಯಿ ಕೀಳುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
