ನಾಮಪತ್ರ ಸಲ್ಲಿಕೆ ಬೆನ್ನಲ್ಲೇ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್​ಐಆರ್​ ದಾಖಲು..!

kusuma
Published on

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿಯಲ್ಲಿ ಆರ್​ಆರ್​ ನಗರ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರ ಕಾರು ಚಾಲಕನ ವಿರುದ್ಧ ಬುಧವಾರ ಎಫ್​ಐಆರ್​ ದಾಖಲಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಎಸ್ಕಾರ್ಟ್ ಹಾಗೂ ಪೈಲೆಟ್ ವಾಹನ ಚಾಲಕ ಮತ್ತು ಕುಸುಮಾ ವಿರುದ್ಧ ಆರ್​ಆರ್​ ನಗರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.

ಆರೋಪವೇನು?

ನಾಮಪತ್ರ ಸಲ್ಲಿಸುವ ಕಚೇರಿಯ 100 ಮೀಟರ್ ದೂರದಲ್ಲಿ ಬ್ಯಾರಿಕೇಡ್​ ಅಳವಡಿಸಲಾಗಿತ್ತು. ಬ್ಯಾರಿಕೇಡ್​ ತೆಗೆದು ಕಾರುಗಳನ್ನು ನೂರು ಮೀಟರ್​ ವ್ಯಾಪ್ತಿಯೊಳಗೆ ತೆಗೆದುಕೊಂಡು ಹೋದ ಆರೋಪ ಕೇಳಿಬಂದಿದೆ. ಐಪಿಸಿ ಸೆಕ್ಷನ್​ 353 (ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ) ಮತ್ತು 188 (ಸರ್ಕಾರಿ ಅಧಿಕಾರಿಯ ಆದೇಶ ಪಾಲಿಸದಿರುವುದು) ಅಡಿಯಲ್ಲಿ ದೂರು ದಾಖಲಾಗಿದೆ.

ಮಂಗಳವಾರವೇ ನಾಮಪತ್ರ ಸಲ್ಲಿಸಿದ್ದ ಕುಸುಮಾ, ಇಂದು ಬುಧವಾರ ಬೆಳಗ್ಗೆ ಮತ್ತೊಮ್ಮೆ ಉಮೇದುವಾರಿಕೆ ಸಲ್ಲಿಸಿದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ತಂದೆ ಹನುಮಂತರಾಯಪ್ಪ ಸಾಥ್​ ನೀಡಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ತಂದೆ ಮತ್ತು ಕುಟುಂಬಸ್ಥರೊಂದಿಗೆ ನಾಗರಬಾವಿ ಬಳಿಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಕುಸುಮಾ ಪೂಜೆ ಸಲ್ಲಿಸಿದ್ದರು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net