More

    ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ

    ಮಡಿಕೇರಿ: ನಾಪೋಕ್ಲುವಿನಲ್ಲಿ ಎರಡುದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಭತ್ತ ಹಾಗೂ ಕಾಫಿ ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ.

    ನಾಲ್ಕುನಾಡು ವ್ಯಾಪ್ತಿಯಲ್ಲಿ ಮಳೆ ಸುರಿಯುತ್ತಿರುವುದು ಕಾಫಿ ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದೆ. ಕಾಫಿ ತೋಟಗಳಲ್ಲಿ ಕಾಫಿ ಬಹುತೇಕ ಹಣ್ಣಾಗಿದ್ದು ಕಾಫಿ ಕೊಯ್ಲು ಆರಂಭಗೊಂಡಿದೆ. ಆದರೆ, ಬಿಸಿಲಿನ ಕೊರತೆ ಯಿಂದ ಕಾಫಿ ಒಣಗಿಸಲು ರೈತರಿಗೆ ಸಾಧ್ಯವಾಗುತ್ತಿಲ್ಲ.

    ಮನೆಯಂಗಳದಲ್ಲಿ, ಕಣದಲ್ಲಿ ಮಾತ್ರವಲ್ಲದೆ ಬೆಳೆಗಾರರು ಕೊಯ್ಲು ಮಾಡಿದ ಕಾಫಿಯನ್ನು ಒಣಗಿಸಲು ಹುಲ್ಲುಗಾವಲು, ಮೈದಾನಗಳನ್ನೂ ಬಳಸುತ್ತಿ ದ್ದಾರೆ. ತುಂತುರು ನೀರಾವರಿ ಕೈಗೊಂಡ ರೈತರ ತೋಟ ಗಳಲ್ಲಿ ಕಾಫಿ ಬಹುತೇಕ ಹಣ್ಣಾಗಿವೆ.

    ಹಿಂದಿನ ವರ್ಷ ಮಳೆಯೂ ಬೇಗನೆ ಸುರಿದಿರುವುದರಿಂದ ಕಾಫಿ ಹಣ್ಣಾಗಿದ್ದು ರೈತರು ಕೊಯ್ಲು ಕೆಲಸದಲ್ಲಿ ತೊಡಗಿದ್ದಾರೆ. ವಾರಗಟ್ಟಲೆ ಬಿಸಿಲು ಇಲ್ಲದೆ ಕಾಫಿ ಒಣಗಿಸುವುದು ಕಷ್ಟಕರವಾಗಿದೆ.

    ಹಲವೆಡೆ ಹಣ್ಣಾಗಿರು ವ ರೋಬಸ್ಟಾ ಕಾಫಿ ಮಳೆಯಿಂದಾಗಿ ಉದುರುತ್ತಿವೆ. ಕಾಫಿನ ಕೊಯ್ಲಿನ ಜತೆಗೆ ಉದುರಿದ ಕಾಫಿ ಬೀಜಗಳನ್ನು ಹೆಕ್ಕುವುದು ಕಷ್ಟಕರವಾದ ಕೆಲಸ. ಬೇಗ ಕೊಯ್ಲು ಪೂರೈಸಿದರೂ ಒಣಗಿಸುವುದು ಕಷ್ಟಕರ ವಾಗುತ್ತಿದೆ ಎಂದು ಸ್ಥಳೀಯ ಬೆಳೆಗಾರರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

    ಹಲವರು ಕಣಗಳಲ್ಲಿ ಕೊಯ್ಲು ಮಾಡಿದ ಕಾಫಿಯನ್ನು ಒಣಗಲು ಹಾಕಿದ್ದು ಮಳೆ, ಮೋಡದಿಂದಾ ಗಿ ಒಣಗದೆ ಹಾಗೆ ಉಳಿದಿದೆ. ಪ್ರತಿದಿನ ಹರಡುವುದು, ಮಳೆ ಬಂದಾಗ ಮುಚ್ಚುವುದು ಮಾಡಬೇಕಿದೆ. ಬಿಸಿಲಿನ ಕೊರತೆಯಿಂದ ಕಾಫಿ ಕೊಯ್ಲು ಮಾಡುವುದು ಸಮಸ್ಯೆಯಾಗಿ ಕಾಡುತ್ತಿದೆ.

    ಪದೇ ಪದೆ ಮೋಡದ ವಾತಾವರಣ ಬೆಳೆಗಾರರಿಗೆ ಮತ್ತಷ್ಟು ಸಮಸ್ಯೆ ತಂದೊಡ್ಡಿದೆ. ಹಲವೆಡೆ ಭತ್ತದ ಕೊಯ್ಲು ಉಳಿಸಿಕೊಂಡಿರುವ ರೈತರಿಗೆ ಮಳೆಯಿಂದಾಗಿ ಸಂಕಷ್ಟ ಎದುರಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts