More

    ರಾಜ್ಯಾದ್ಯಂತ ಚುಮು ಚುಮು ಚಳಿ; ಹಲವೆಡೆ ಮಳೆ ಸಾಧ್ಯತೆ

    ಬೆಂಗಳೂರು: ರಾಜ್ಯಾದಾದ್ಯಂತ ಶೀತಗಾಳಿ ದಿನದಿಂದ ದಿನಕ್ಕೆ ಜೋರಾಗಿ ಬೀಸುತ್ತಿದ್ದು, ಹಲವೆಡೆ ಮೋಡ ಕವದಿದ್ದು, 22 ಜಿಲ್ಲೆಗಳಲ್ಲಿ ಜನವರಿ 9ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಶೀತಗಾಳಿಯಿದ್ದು, ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, 28 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ವಿಜಯಪುರದಲ್ಲಿ 11.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

    ಇದನ್ನೂ ಓದಿ: ವಿನಯ್​-ಸಂಗೀತಾ ನಡುವೆ ಶುರುವಾಯ್ತು ಕಲಹ; ಬಿಗ್​ಬಾಸ್​ ಮನೆಯಲ್ಲಿ ತಾರತಮ್ಯ ನಡೆಯುತ್ತಿರುವುದು ನಿಜಾನಾ

    ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ 5-6 ದಿನಗಳ ಕಾಲ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಜನವರಿ 7ರಿಂದ 9ರವರೆಗೆ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

    ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಇಂದು ಮತ್ತು ನಾಳೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ,ವಿಜಯನಗರದಲ್ಲಿ ಜನವರಿ 6 ರಿಂದ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts