18.1 C
Bangalore
Saturday, December 7, 2019

ಕರುನಾಡು ಥಂಡಾ

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...
<< ಶತಮಾನದ ದಾಖಲೆ ಬರೆದ ಚಳಿ >>

ಬೆಂಗಳೂರು: ರಾಜ್ಯ ಅಕ್ಟೋಬರ್​ನಲ್ಲೇ ಚಳಿಗೆ ಥರಗುಟ್ಟಲಾರಂಭಿಸಿದೆ. ವಿಜಯಪುರ, ಮೈಸೂರಿನಲ್ಲಿ ಕನಿಷ್ಠ ತಾಪಮಾನ 11 ಡಿಗ್ರಿ ಸೆಲ್ಸಿಯೆಸ್​ಗೆ ಕುಸಿದಿದ್ದು, ಇದು ಕಳೆದೊಂದು ಶತಮಾನದಲ್ಲೇ ಆ ಭಾಗದಲ್ಲಿ ವರ್ಷದ ಈ ಅವಧಿಯಲ್ಲಿ ಅನುಭವಕ್ಕೆ ಬಂದಿರುವ ಅತ್ಯಧಿಕ ಚಳಿ. ಹವಾಮಾನ ಇಲಾಖೆ ಪ್ರಕಾರ ಅ.30ರಂದು ವಿಜಯಪುರದಲ್ಲಿ 11.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಇದು ಕಳೆದ 127 ವರ್ಷಗಳಲ್ಲಿ ಅಕ್ಟೋಬರ್​ನಲ್ಲಿ ದಾಖಲಾದ ಅತಿ ಕನಿಷ್ಠ ತಾಪಮಾನ. ಮೈಸೂರಲ್ಲಿ ಕನಿಷ್ಠ ತಾಪಮಾನ 11.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ಕಳೆದ 125 ವರ್ಷಗಳಲ್ಲಿ ಅಕ್ಟೋಬರ್​ನಲ್ಲಿ ದಾಖಲಾದ ಅತಿ ಕನಿಷ್ಠ ತಾಪಮಾನವಾಗಿದೆ. ಧಾರವಾಡ, ಹಾವೇರಿ, ಚಾಮರಾಜನಗರ, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 12-13 ಡಿಗ್ರಿ ಸೆಲ್ಸಿಯಸ್ ನಡುವಿದ್ದು, ಇದು ಕಳೆದ 18 ವರ್ಷದಲ್ಲೇ ದಾಖಲಾದ ಅತ್ಯಧಿಕ ಚಳಿಯಾಗಿದೆ.

ಹಿಂಗಾರು ವಿಳಂಬ ಕಾರಣ

ವಾಡಿಕೆಯಂತೆ ಅ.20 ಆಸುಪಾಸಿನಲ್ಲಿ ರಾಜ್ಯಕ್ಕೆ ಹಿಂಗಾರು ಪ್ರವೇಶಿಸಬೇಕು. ಪ್ರಸಕ್ತ ವರ್ಷ ಅಕ್ಟೋಬರ್ ಕಳೆದರೂ ಹಿಂಗಾರು ಪ್ರವೇಶಿಸಿಲ್ಲ. ಇದರಿಂದಾಗಿ ಉತ್ತರ ಕರ್ನಾಟಕ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ವಾತಾವರಣವಿದೆ. ಮೋಡಗಳಿಲ್ಲದ ಶುಭ್ರಾಕಾಶವಿದ್ದು, ರಾತ್ರಿ ವೇಳೆ ಭೂಮಿಯಿಂದ ಎದ್ದ ಬಿಸಿಗಾಳಿ ಅಡೆತಡೆಯಿಲ್ಲದೆ ಆಕಾಶದತ್ತ ಹೋಗುತ್ತಿದೆ.

ಜತೆಗೆ ಉತ್ತರ ಭಾಗದಿಂದ ಶೀತಗಾಳಿಯೂ ಬೀಸುತ್ತಿದೆ. ಮುಂಜಾನೆಯಲ್ಲಿ ಆಕಾಶದಲ್ಲಿ ಕೆಳಮಟ್ಟದಲ್ಲಿರುವ ಮಂಜು ಸೂರ್ಯನ ಶಾಖಕ್ಕೆ ಭೂಮಿಗೆ ಬೀಳುತ್ತಿದ್ದು ಚಳಿ ಹೆಚ್ಚಾಗಲು ಕಾರಣ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ ರೆಡ್ಡಿ ‘ವಿಜಯವಾಣಿ’ಗೆ ತಿಳಿಸಿದ್ದಾರೆ. ಇಂತಹ ವಾತಾವರಣದಿಂದ ಗರಿಷ್ಠ ತಾಪಮಾನವೂ ಏರಿಕೆಯಾಗುತ್ತದೆ. ಬೆಳಗ್ಗೆ ಬಿಸಿಲ ಝುಳವಿದ್ದರೆ ರಾತ್ರಿ ಮೈಕೊರೆಯುವ ಚಳಿ ಇರುತ್ತದೆ. ಒಂದಕ್ಕೊಂದು ತದ್ವಿರುದ್ಧ ವಾತಾವರಣ ಪ್ರಸ್ತುತ ರಾಜ್ಯದಲ್ಲಿದೆ. ಕನಿಷ್ಠ ತಾಪಮಾನ ವಾಡಿಕೆಗಿಂತ 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಿದ್ದರೆ, ಗರಿಷ್ಠ ತಾಪಮಾನ ವಾಡಿಕೆಗಿಂತ 1.6 ರಿಂದ 3 ಡಿಗ್ರಿ ಸೆಲ್ಸಿಯಸ್ ಅಧಿಕವಿದೆ ಎಂದು ಶ್ರೀನಿವಾಸ ರೆಡ್ಡಿ ತಿಳಿಸಿದರು. ಕಾರವಾರದಲ್ಲಿ ರಾಜ್ಯದ ಗರಿಷ್ಠ ತಾಪಮಾನ(36.4 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ.

ನ.2ರಿಂದ ಹಿಂಗಾರು?

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಬಳ್ಳಾರಿ, ಬೆಂಗಳೂರು ನಗರ ಸೇರಿ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ನ.2ರಿಂದ ಸಾಧಾರಣದಿಂದ ಭಾರಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲೂ ತುಂತುರು ಮಳೆ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...