More

    ಕಾರು ಡಿಕ್ಕಿಯಾಗಿ ಶಾಲಾ ಬಾಲಕನಿಗೆ ಗಾಯ

    ಬೇಲೂರು: ತಾಲೂಕಿನ ಚಿಕ್ಕಬೇಡಗೆರೆ ಗ್ರಾಮದ ಬಳಿ ಸೋಮವಾರ ಸಂಜೆ ಕಾರು ಡಿಕ್ಕಿ ಹೊಡೆದು ಶಾಲಾ ಬಾಲಕ ಗಾಯಗೊಂಡಿದ್ದಾನೆ.

    ಬೇಲೂರಿನಿಂದ ಚಿಕ್ಕಮಗಳೂರಿಗೆ ವೇಗವಾಗಿ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದು ಶಾಲೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಚಿಕ್ಕಬೇಡಗೆರೆ ಗ್ರಾಮದ ರಾಜೇಶ್(13) ಎಂಬ ವಿದ್ಯಾರ್ಥಿಗೂ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಬಾಲಕನ ಕಾಲು ಮುರಿದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts