More

    ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸಿ

    ಶಿವಮೊಗ್ಗ: ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪಿಸಬೇಕೆಂದು ಒತ್ತಾಯಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು.

    ನಗರದ ಹೃದಯ ಭಾಗದಲ್ಲಿರುವ ವೃತ್ತಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರು ನಾಮಕರಣ ಮಾಡಲಾಗಿದೆ. ಆದರೆ ಇಲ್ಲಿ ರಾಯಣ್ಣನ ಪ್ರತಿಮೆಯೇ ಇಲ್ಲ. ನಗರ ಪಾಲಿಕೆ ಮತ್ತು ಸ್ಮಾರ್ಟ್ಸಿಟಿ ಸಿಬ್ಬಂದಿ ಕೆಲವು ದಿನಗಳ ಹಿಂದೆ ಈ ವೃತ್ತದಲ್ಲಿ ಕತ್ತಿ, ಗುರಾಣಿ ಇಟ್ಟಿದ್ದಾರೆ. ಇದರ ಹಿನ್ನೆಲೆಯೇನು ಎಂಬುದು ಯಾರಿಗೂ ತಿಳಿದಿಲ್ಲ. ಈ ಕತ್ತಿ ಗುರಾಣಿ ತೆರವು ಮಾಡಿ ಪ್ರತಿಮೆ ಸ್ಥಾಪಿಸಿ ಎಂದು ಆಗ್ರಹಿಸಿದರು.
    ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಒತ್ತಾಯಿಸಿ ಹಲವು ಬಾರಿ ಪ್ರತಿಭಟನೆ ನಡೆಸಿದ್ದು, 2012ರಲ್ಲಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಪ್ರತಿಮೆ ಸ್ಥಾಪಿಸಲು ಅನುಮತಿ ನೀಡಲಾಗಿತ್ತು. ಆದರೆ ಇದುವರೆಗೂ ಅಲ್ಲಿ ಪ್ರತಿಮೆ ಸ್ಥಾಪಿಸಿಲ್ಲ. ಪ್ರತಿಮೆ ಸ್ಥಾಪನೆ ಮಾಡದೇ ಇದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಅಧ್ಯಕ್ಷ ವಾಟಾಳ್ ಮಂಜುನಾಥ್, ಉಪಾಧ್ಯಕ್ಷ ರವಿ ಸಾಧುಶೆಟ್ಟಿ, ಯುವ ಘಟಕದ ಅಧ್ಯಕ್ಷ ಸತೀಶ್ ಗೌಡ, ನಗರಾಧ್ಯಕ್ಷ ಲೋಕೇಶ್, ಪ್ರಮುಖರಾದ ಗಿರೀಶ್, ಅಕ್ಬರ್ ಪಾಷಾ, -Á್ರ‍್ಯಂಕ್ಲಿನ್ ಸಾಲೋಮನ್, ಸಂತೋಷ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts