More

    ಅರ್ಜುನ ಆನೆಯ ಸ್ಮಾರಕ ನಿರ್ಮಾಣಕ್ಕೆ ದರ್ಶನ್ ಹೆಸರಲ್ಲಿ ಲಕ್ಷಾಂತರ ರೂಪಾಯಿ ಹಣ ಸಂಗ್ರಹಿಸಿದ ಖದೀಮ

    ಬೆಂಗಳೂರು: ಮೈಸೂರು ದಸರಾದಲ್ಲಿ ಅಂಬಾರಿ ಹೊರುತ್ತಿದ್ದ ಆನೆ ಅರ್ಜುನನ ವೀರ ಮರಣ ಹೊಂದಿ ಹಲವು ದಿನಗಳು ಕಳೆದಿವೆ. ಆದರೆ ಸ್ಮಾರಕ ನಿರ್ಮಾಣಕ್ಕೂ ಮೊದಲೇ ಲಕ್ಷಾಂತರ ರೂಪಾಯಿ ಹಣ ಅವ್ಯವಹಾರ ನಡೆಸಿರುವ ಆರೋಪ ಕೇಳಿಬಂದಿದೆ.

    ಅರ್ಜುನನ ಸ್ಮಾರಕ ನಿರ್ಮಾಣ ಮಾಡೋದಕ್ಕೆಂದು ನಟ ದರ್ಶನ್ ಹೆಸರೇಳಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಆಗ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದ್ದು, ಮೈಸೂರು ಜಿಲ್ಲೆಯ ನವೀನ್ ಎಚ್‌ಎನ್ ಎಂಬಾತ ಅರ್ಜುನ ಪಡೆ ಎಂಬ ವಾಟ್ಸಾಪ್ ಗ್ರೂಪ್ ಕ್ರಿಯೇಟ್ ಮಾಡಿ ಲಕ್ಷಾಂತರ ರೂಪಾಯಿ ಹಣ ಸಂಗ್ರಹ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

    ಹಲವರು ಹಣ ಸಹಾಯ ಮಾಡಿದ್ದಾರೆ. ಇದರಿಂದ ನವೀನ್​ ಹೆಚ್​​​ಎನ್​​ ಖಾತೆಗೆ ಲಕ್ಷಾಂತರ ಹಣ ಜಮೆ ಆಗಿದೆ ಎಂದು ಮಲೆನಾಡು ರಕ್ಷಣಾ ವೇದಿಕೆ ಅಧ್ಯಕ್ಷ ಆರೋಪ ಮಾಡಿದ್ದಾರೆ. ಈತ ಹಣ ಸಂಗ್ರಹಿಸಿದ ಬಗ್ಗೆ ದೂರು ದಾಖಲಾಗಿದೆ.

    ಅರ್ಜುನ ಆನೆ ಸ್ಮಾರಕ ನಿರ್ಮಾಣಕ್ಕೆ ಸಹಾಯ ಮಾಡುವಂತೆ ನವೀನ್​ ನಟ ದರ್ಶನ್ ಅವರ ಪಿಎಯನ್ನೂ ಸಂಪರ್ಕ ಮಾಡಿದ್ದಾನೆ. ಅವರಿಂದ ಕಲ್ಲನ್ನು ತೆರೆಸಿಕೊಂಡಿದ್ದಾನೆ. ಈ ಕಲ್ಲನ್ನು ಅರಣ್ಯ ಇಲಾಖೆಯವರಿಗೆ 30 ಸಾವಿರ ರೂ.ಗೆ ಮಾರಿದ್ದಾನೆ ಅಂತ ಆರೋಪ ಕೇಳಿಬಂದಿದೆ. ಕೆಲವು ನವೀನ್ ಅಕೌಂಟ್‌ಗೆ ಹಣ ಹಾಕಿರುವುದಾಗಿ ಪೋನ್ ಪೇ, ಗೂಗಲ್ ಪೇ ಸ್ಕ್ರೀನ್‌ ಶಾಟ್ ಸೋಶಿಯಲ್ ಮೀಡಿಯಾದಲ್ಲಿ ಹಾಕುತ್ತಿದ್ದಾರೆ. ಸಾರ್ವಜನಿಕರಿಂದ ಹಣ ಸಂಗ್ರಹಿಸಲು ಆತನಿಗೆ ಅನುಮತಿ ಕೊಟ್ಟಿದ್ದು ಯಾರು? ಎನ್ನುವ ಪ್ರಶ್ನೆ ಮೂಡಿದೆ.

    ಕೆಕೆಆರ್ ಗೆಲುವಿನಿಂದ ಭಾವುಕರಾದ ಶಾರುಖ್ ಕುಟುಂಬ; ಖುಷಿಯಿಂದ ಅಳುತ್ತಲೇ ತಂದೆಯನ್ನು ಅಪ್ಪಿಕೊಂಡ ಸುಹಾನಾ ಖಾನ್..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts