More

    ಜಿಫ್‌ಲೈನ್ ಸಾಹಸ ಕ್ರೀಡೆಗೆ ಜಿಲ್ಲಾಧಿಕಾರಿ ಚಾಲನೆ

    ಮಡಿಕೇರಿ: ಸಸ್ಯಗಳ ಲೋಕ, ಪ್ರಾಕೃತಿಕ ಸೌಂದರ್ಯ ಒಳಗೊಂಡಿರುವ ರಾಜಸೀಟು ಉದ್ಯಾನವನದಲ್ಲಿ ಜಿಫ್‌ಲೈನ್ ಸಾಹಸ ಕ್ರೀಡೆಯು ಸೇರ್ಪಡೆಯಾಗಿದ್ದು, ಸಾಹಸ ಕ್ರೀಡೆಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಚಾಲನೆ ನೀಡಿದರು.


    ಸ್ವತಃ ತಾವೇ ಜಿಫ್‌ಲೈನ್‌ನಲ್ಲಿ ಸಾಹಸ ಕ್ರೀಡೆಯಲ್ಲಿ ಪಾಲ್ಗೊಂಡು ಗಮನಸೆಳೆದರು. ನಂತರ ಜಿಫ್‌ಲೈನ್ ಸಾಹಸ ಕ್ರೀಡೆಯ ಅನುಭವ ಹಂಚಿಕೊಂಡ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಒಟ್ಟು ೩೧೦ ಮೀಟರ್ ಉದ್ದದ ಜಿಫ್‌ಲೈನ್ ಅಳವಡಿಸಲಾಗಿದೆ. ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಜತೆಗೆ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯಿಂದ ಸುರಕ್ಷತೆ ಸಂಬಂಧ ಪ್ರಮಾಣ ಪತ್ರ ಪಡೆಯಬೇಕು. ಜತೆಗೆ ಸಾಹಸ ಅಕಾಡೆಮಿಯ ಅಗತ್ಯ ಮಾರ್ಗದರ್ಶನ ಪಾಲಿಸುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು.


    ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್.ಆರ್.ನಾಯಕ್ ಮಾತನಾಡಿ, ಜಿಫ್‌ಲೈನ್ ಸಾಹಸ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಒಬ್ಬರಿಗೆ ೩೦೦ ರೂ. ನಿಗದಿ ಮಾಡಲಾಗಿದೆ. ಇಲಾಖಾ ಖಾಸಗಿ ಸಹಭಾಗಿತ್ವದಲ್ಲಿ ಜಿಪ್‌ಲೈನ್ ಸಾಹಸ ಕ್ರೀಡೆ ನಡೆಯಲಿದೆ. ಬೆಂಗಳೂರು ಸಂಸ್ಥೆಯವರು ೫ ವರ್ಷದವರೆಗೆ ನಿರ್ವಹಿಸಲಿದ್ದಾರೆ ಎಂದು ಹೇಳಿದರು.


    ಜಿಫ್‌ಲೈನ್ ಸಾಹಸ ಕ್ರೀಡೆಯ ಸುರಕ್ಷತೆ ಸಂಬಂಧಿಸಿದಂತೆ ನಿಧಿನ್‌ರವರು ಮಾಹಿತಿ ನೀಡಿದರು. ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರಮೋದ್, ನಿರ್ಮಿತಿ ಕೇಂದ್ರದ ಎಂಜಿನಿಯರ್ ರಾಘವೇಂದ್ರ, ಪೊನ್ನಚ್ಚನ ಮಧು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts