More

    ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ನಗರ ಸ್ವಚ್ಛಗೊಳಿಸಿದ ಜಿಲ್ಲಾಧಿಕಾರಿ

    ಹಾವೇರಿ: ಮಹತ್ವಾಗಾಂಧಿ ಜಯಂತಿ ನಿಮಿತ್ತ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದಿಂದ ಭಾನುವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಹಾಗೂ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಸೇರಿ ಹಲವರು ಪಾಲ್ಗೊಂಡು ನಗರದ ವಿವಿಧ ರಸ್ತೆಗಳು ಹಾಗೂ ವೃತ್ತಗಳ ಸ್ವಚ್ಛಗೊಳಿಸಿದರು.
    ಹೊಸಮನಿ ಸಿದ್ದಪ್ಪ ವೃತ್ತದ ಸ್ವಚ್ಛತಾ ಕಾರ್ಯದ ಮೂಲಕ ಶ್ರಮದಾನಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಸುಭಾಸ್ ವೃತ್ತ ಹಾಗೂ ಮಾರುಕಟ್ಟೆ ರಸ್ತೆಯಲ್ಲಿ ಪೊರಕೆಹಿಡಿದು ಬೀದಿಯ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡರು. ನಂತರ ಗುತ್ತಲ ರಸ್ತೆಯ ಕುಂಬಾರ ಗುಂಡಿ ಕೊಳಚೆ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. ರೈಲ್ವೆ ನಿಲ್ದಾಣ, ಗಾಂಧಿ ಭವನ ಹಾಗೂ ಡಾ.ಬಿ.ಆರ್.ಅಂಬೇಡ್ಕರ ವೃತ್ತದ ಮಾರ್ಗದಲ್ಲಿ ಕೈಗೊಳ್ಳಬೇಕಾದ ಸ್ವಚ್ಛತಾ ಕಾಮಗಾರಿಗಳ ಕುರಿತು ಸ್ಥಳೀಯ ನಗರಸಭೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
    ಲಾಲಬಹದ್ದೂರ್ ಶಾಸ್ತ್ರಿ ಮಾರುಕಟ್ಟೆ ಮಾರ್ಗದ ರಸ್ತೆಯ ಸ್ವಚ್ಛತಾ ಕಾರ್ಯದಲ್ಲಿ ಸ್ಥಳೀಯ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಹಾಗೂ ನಗರಸಭೆ ಸದಸ್ಯರಾದ ಸಂಜೀವಕುಮಾರ ನೀರಲಗಿ ಶ್ರಮದಾನದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಲಾಲಬಹದ್ದೂರ್ ಶಾಸ್ತ್ರಿ ಮಾರುಕಟ್ಟೆಯಲ್ಲಿ ಆಧುನಿಕ ಮಾರುಕಟ್ಟೆ ನಿರ್ಮಾಣ ಹಾಗೂ ಮಾರುಕಟ್ಟೆ ಸೇರಿದಂತೆ ನಗರದ ವಿವಿಧೆಡೆ ಸಾರ್ವಜನಿಕ ಶೌಚಗೃಹ ನಿರ್ಮಾಣ ಕುರಿತು ಸ್ಥಳ ಪರಿಶೀಲನೆ ನಡೆಸಿದರು.
    ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪ ವಿಭಾಗಾಧಿಕಾರಿ ಡಾ. ಚನ್ನಪ್ಪ, ತಹಸೀಲ್ದಾರ್ ಶಂಕರ ಜಿ.ಎಸ್., ಆಯುಕ್ತ ಪರಶುರಾಮ ಚಲವಾದಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರೇಷ್ಮಾ ಕೌಸರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿದೇಶಕ ಡಾ. ಉಮೇಶಪ್ಪ, ಅಬಕಾರಿ ಇಲಾಖೆ ಉಪ ಆಯುಕ್ತೆ ಶೈಲಜಾ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂಬಾಬಾ ಮುದ್ದೇಬಿಹಾಳ ಸೇರಿ ಮತ್ತಿತರರು ಇಲಾಖೆ ಅಧಿಕಾರಿಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿ ಶ್ರಮದಾನದ ಮೂಲಕ ನಗರ ಸ್ವಚ್ಛತೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts