More

    ಅತಿಥಿ ಉಪನ್ಯಾಸಕರಿಗೆ ಕಾಲೇಜು ಬದಲಾವಣೆ ಅವಕಾಶ

    ಬೆಂಗಳೂರು: ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಆಯ್ಕೆಯಾಗಿರುವ ಉಪನ್ಯಾಸಕರಿಗೆ ಕಾಲೇಜುಗಳ ಬದಲಾವಣೆಗೆ ಕಾಲೇಜು ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದೆ.

    ಈಗಾಗಲೆ, ಕಾಲೇಜು ಶಿಕ್ಷಣ ಇಲಾಖೆಯು 10,600 ಹುದ್ದೆಗಳಿಗೆ ಮೊದಲ ಸುತ್ತಿನ ಕೌನ್ಸೆಲಿಂಗ್ ನಡೆಸಿ ಉಪನ್ಯಾಸಕರನ್ನು ಆಯ್ಕೆ ಮಾಡಿತ್ತು. ಉಪನ್ಯಾಸಕರು ಕಾಲೇಜುಗಳಿಗೆ ಹೋಗಿ ವರದಿ ಮಾಡಿಕೊಂಡಿದ್ದರು. ಆದರೆ, ಕಾಲೇಜು ದೂರ, ಅಲ್ಲಿನ ವಾತಾವರಣ ಸೇರಿದಂತೆ ಹಲವು ಕಾರಣಗಳಿಂದ ಕಾಲೇಜು ಬದಲಾವಣೆಗೆ ಉಪನ್ಯಾಸಕರು ಇಲಾಖೆಗೆ ಮನವಿ ಸಲ್ಲಿಸಿದ್ದರು.

    ಈ ಹಿನ್ನೆಲೆಯಲ್ಲಿ ಬೇರೆ ಕಾಲೇಜು ಆಯ್ಕೆ ಮಾಡಿಕೊಳ್ಳಲು ಎರಡನೇ ಸುತ್ತಿನ ಕೌನ್ಸೆಲಿಂಗ್‌ಗೆ ಅವಕಾಶ ಕಲ್ಪಿಸುವಂತೆ ಮುಚ್ಚಳಿಕೆ ಪತ್ರಕ್ಕೆ ಸಹಿ ಪಡೆದು ಕಾಲೇಜು ಬದಲಾವಣೆಗೆ ಅವಕಾಶ ಕಲ್ಪಿಸಲು ಇಲಾಖೆ ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದಾರೆ.

    ಇದನ್ನೂ ಓದಿ: ಮಸೀದಿ-ಮಂದಿರಗಳ ಧ್ವನಿವರ್ಧಕದ ಶಬ್ದ ತಗ್ಗಿಸದಿದ್ದರೆ ಕಾನೂನುಕ್ರಮ: ಪೊಲೀಸ್ ಕಮಿಷನರ್

    ಕಾಲೇಜು ಬದಲಾವಣೆ ಕೋರಿ ಅರ್ಜಿ ಸಲ್ಲಿಸಿದ ನಂತರ ಉಪನ್ಯಾಸಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗುತ್ತದೆ. ಈ ಕಾರ್ಯಭಾರವನ್ನು ಮುಂದಿನ ಸುತ್ತಿನ ಕೌನ್ಸೆಲಿಂಗ್‌ಗೆ ಸೇರಿಸಲಾಗುವುದು. ತದನಂತರ ಯಾವುದೇ ಕಾರಣಕ್ಕೂ ಪುನಃ ಅದೇ ಕಾಲೇಜನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಎಲ್ಲ ಉಪನ್ಯಾಸಕರನ್ನು ಶೀಘ್ರದಲ್ಲೇ ನಡೆಯುವ ಎರಡನೇ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆಗೆ ಸೇರಿಸಿ ಒಟ್ಟಾರೆ ಲಭ್ಯವಾಗುವ ಕಾರ್ಯಭಾರದ ಆಧಾರದ ಮೇಲೆ ಕಾಲೇಜು ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

    ಟ್ರೆಕ್ಕಿಂಗ್​​ಗೆ ತೆರಳಿ ಅಪಾಯಕ್ಕೆ ಸಿಲುಕಿದ ಯುವಕ; ರಕ್ಷಣೆಗಾಗಿ ಹರಸಾಹಸ

    ಕಬ್ಬು ತಿನ್ನುವ ಆಸೆಯಿಂದಾಗಿ ಪ್ರಾಣ ಕಳ್ಕೊಂಡ ಬಾಲಕ; ಟ್ರ್ಯಾಕ್ಟರ್​ ಅಡಿಗೆ ಸಿಲುಕಿ ಸಾವು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts