More

    ಕಾಲೇಜು ಆರಂಭದ ದಿನ ಇಬ್ಬರಿಗೆ ಸೋಂಕು ದೃಢ : ವಿದ್ಯಾರ್ಥಿ, ಸಿಬ್ಬಂದಿಗಳ ಕೋವಿಡ್ ಪರೀಕ್ಷೆಗೆ ಪಾಲಿಕೆ ವ್ಯವಸ್ಥೆ

    ಬೆಂಗಳೂರು : ಕಾಲೇಜುಗಳು ಆರಂಭವಾದ ಮೊದಲ ದಿನ (ನ.17) 360 ಕಾಲೇಜುಗಳಲ್ಲಿ ಒಟ್ಟು 11,574 ಕಾಲೇಜು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಇದರಲ್ಲಿ ಅಗ್ರಹಾರ ದಾಸರಹಳ್ಳಿ ವಾರ್ಡ್ ವ್ಯಾಪ್ತಿಯ ಕಾಲೇಜಿನಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

    ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಮತ್ತು ಸರ್ಕಾರದ ಕೋವಿಡ್ ಮಾರ್ಗಸೂಚಿ ಪ್ರಕಾರ ಕಾಲೇಜುಗಳು ಮತ್ತು ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗೆ ಆರ್‌ಟಿ- ಪಿಸಿಆರ್ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು. ರೋಗ ಲಕ್ಷಣಗಳಿರುವವರು ಪರೀಕ್ಷಾ ವರದಿ ಬರುವವರೆಗೆ ಕಾಲೇಜಿಗೆ ಹಾಜರಾಗಬಾರದು. ನೆಗೆಟಿವ್ ವರದಿ ಇದ್ದರೆ ಮಾತ್ರ ತರಗತಿಗೆ ಹಾಜರಾಜಬೇಕು ಎಂದು ಹೇಳಿದ್ದಾರೆ.

    ಬಿಬಿಎಂಪಿ ವತಿಯಿಂದ ನಗರದಲ್ಲಿನ 432 ಕಾಲೇಜುಗಳ ಸುಮಾರು 60 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಕೋವಿಡ್ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಪಾಲಿಕೆಯ 141 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಎಲ್ಲ ಶಿಕ್ಷಣ ಸಂಸ್ಥೆಗಳು ಮತ್ತು ಕಾಲೇಜುಗಳನ್ನು ಜೋಡಣೆ ಮಾಡಲಾಗಿದೆ. ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಹತ್ತಿರದ ಪಿಎಚ್‌ಸಿಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬಹುದು. ಜತೆಗೆ, 450 ಸಂಚಾರಿ ಸ್ವ್ಯಾಬ್ ಸಂಗ್ರಹ ಘಟಕದ ತಂಡಗಳನ್ನು ಕಾಲೇಜುಗಳ ಬಳಿ ನಿಯೋಜಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಕಾಲೇಜುಗಳು ಪ್ರಸ್ತುತ ಶೇ.30 ವಿದ್ಯಾರ್ಥಿಗಳ ಹಾಜರಾತಿಯನ್ನು (ಅಂತಿಮ ವರ್ಷದ ಪದವಿ) ನಿರೀಕ್ಷಿಸುತ್ತಿವೆ. ಬಿಬಿಎಂಪಿ ಸ್ವ್ಯಾಬ್ ಸಂಗ್ರಹ ಘಟಕದ ಸಿಬ್ಬಂದಿ ಒಂದೆರಡು ದಿನಗಳಲ್ಲಿ ಎಲ್ಲರಿಗೂ ಕೋವಿಡ್ ಪರೀಕ್ಷೆ ಮಾಡಲಿದ್ದಾರೆ. ನಂತರದ ದಿನಗಳಲ್ಲಿ ಕಾಲೇಜುಗಳ ಬಳಿ ಕೋವಿಡ್ ಪರೀಕ್ಷೆ ಮಾಡಲು ಕೆಲವು ತಂಡಗಳನ್ನು ನಿಯೋಜಿಸಲಾಗುತ್ತದೆ.

    ಕೋವಿಡ್ ನಿಯಮ ಪಾಲನೆ ಕಡ್ಡಾಯ :
    ಕರೊನಾ ಸೋಂಕು ಕಾಣಿಸಿಕೊಂಡ ನಂತರ ಏಪ್ರಿಲ್‌ನಿಂದ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು. ಸುಮಾರು 8 ತಿಂಗಳ ಬಳಿಕ ಕರೊನಾ ಸೋಂಕು ಇಳಿಮುಖವಾಗುತ್ತಾ ಸಾಗಿದೆ. ಈ ಹಿನ್ನೆಲೆಯಲ್ಲಿ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಈ ವೇಳೆ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಭೋದಕ ಸಿಬ್ಬಂದಿ ಹಾಗೂ ಕಾಲೇಜುಗಳ ಆಡಳಿತ ಸಿಬ್ಬಂದಿಗೆ ಸಾಮಾಜಿಕ ಅಂತರ, ಕಡ್ಡಾಯ ಮಾಸ್ಕ್ ಧರಿಸುವಿಕೆ, ದೇಹದ ಉಷ್ಣತೆ ಪರೀಕ್ಷೆ, ಸ್ಯಾನಿಟೈಸರ್ ಬಳಕೆ ಸೇರಿ ಕೋವಿಡ್ ನಿಯಮ ಪಾಲನೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಪಾಲಿಕೆ ಆಯುಕ್ತರು ತಿಳಿಸಿದರು.

    24 ಗಂಟೆಯೊಳಗೆ ಕೋವಿಡ್ ವರದಿ : ಕೋವಿಡ್ ಪರೀಕ್ಷೆಗೆ ಮಾಡಲಾದ ಕಾಲೇಜು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ವರದಿಯನ್ನು 24 ಗಂಟೆಗಳ ಐಸಿಎಂಆರ್ ಪೋರ್ಟಲ್‌ಗೆ ಅಪ್‌ಲೋಡ್ ಮಾಡಲಾಗುತ್ತದೆ. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ  https://www.covidwar.karnataka.gov.in/service1 ಪೋರ್ಟಲ್‌ನಲ್ಲಿ ವರದಿ ಪಡೆಯಬಹುದು. ಜತೆಗೆ, ಪಿಡಿಎ್ ರೂಪದಲ್ಲಿರು ವರದಿಯನ್ನು ಪ್ರಿಂಟ್ ಪಡೆಯಬಹುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts