ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ವೇದಿಕೆ : ‘ದೃಷ್ಟಿ’ ಬಿಡುಗಡೆಗೊಳಿಸಿ ಉದಯ ಕುಮಾರ್ ಶೆಟ್ಟಿ ಹೇಳಿಕೆ

drusti
ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾರ್ಷಿಕ ಸಂಚಿಕೆ ‘ದೃಷ್ಟಿ’ಯನ್ನು ಉದಯ ಕುಮಾರ್ ಶೆಟ್ಟಿ ಬಿಡುಗಡೆಗೊಳಿಸಿದರು
Published on

ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ

ಯಾವುದೇ ವಿದ್ಯಾಸಂಸ್ಥೆಯ ವಾರ್ಷಿಕ ಸಂಚಿಕೆ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಕಾರಣವಾಗುತ್ತದೆ. ಸುಪ್ತ ಮನಸ್ಸಿನ ಭಾವನೆಗಳಿಗೆ ವೇದಿಕೆಯಾಗುತ್ತದೆ ಎಂದು ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಉದಯ ಕುಮಾರ್ ಶೆಟ್ಟಿ ಹೇಳಿದರು. ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಸಾಲಿನ ಕಾಲೇಜು ವಾರ್ಷಿಕ ಸಂಚಿಕೆ ‘ದೃಷ್ಟಿ’ ಬಿಡುಗಡೆಗೊಳಿಸಿ ಶನಿವಾರ ಮಾತನಾಡಿದರು.

ಶಿಕ್ಷಣ ಉದ್ಯಮವಾಗುತ್ತಿರುವ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಕ್ರಿಯಾಶೀಲತೆ ಶೂನ್ಯವಾಗುತ್ತಿದೆ. ಇಂತಹ ಸಮಯದಲ್ಲಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪಿಯು ಕಾಲೇಜಿನ ವಾರ್ಷಿಕ ಸಂಚಿಕೆ ವಿದ್ಯಾರ್ಥಿಗಳಲ್ಲಿನ ಕೌಶಲ ಹೊರಹೊಮ್ಮಿಸುವಲ್ಲಿ ಗಮನಾರ್ಹ ಕಾರ್ಯವಾಗಿದೆ ಎಂದರು. ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ವಿಶ್ವಸ್ಥ ಮಂಡಳಿ ಅಧ್ಯಕ್ಷ ಡಾ.ಕಾಶೀನಾಥ್ ಪೈ, ಕಾರ್ಯದರ್ಶಿ ಎನ್.ಸದಾಶಿವ ನಾಯಕ್, ಆಂಗ್ಲಭಾಷೆ ಉಪನ್ಯಾಸಕ ಥಾಮಸ್ ಪಿ.ಎ. ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಸೃಷ್ಟಿ ಸ್ವಾಗತಿಸಿ, ದೃಷ್ಟಿ ವಾರ್ಷಿಕ ಸಂಚಿಕೆ ನಿರ್ವಾಹಕ ಸಂಪಾದಕ ಸುಜಯೀಂದ್ರ ಹಂದೆ ಎಚ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾರತಿ ಅತಿಥಿಯನ್ನು ಪರಿಚಯಿಸಿದರು. ಶ್ರೇಯಲ್ ವಂದಿಸಿ, ಗುರುಚರಣ್ ವೈದ್ಯ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net