More

    ಕಾಲೇಜಿನ ಎರಡನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿನಿ; ಆತ್ಮಹತ್ಯೆ ಯತ್ನದಲ್ಲಿ ಕಾಲು-ತಲೆಗೆ ಗಂಭೀರ ಗಾಯ

    ಬೆಂಗಳೂರು: ವಿದ್ಯಾರ್ಥಿನಿಯೊಬ್ಬಳು ಕಾಲೇಜಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದು, ಕಾಲು ಹಾಗೂ ತಲೆಗೆ ಗಂಭೀರ ಗಾಯಗಳಾಗಿವೆ. ಬೆಂಗಳೂರಿನ ಸೇಕ್ರೆಡ್ ಹಾರ್ಟ್​ ಕಾಲೇಜಿನಲ್ಲಿ ಈ ಪ್ರಕರಣ ನಡೆದಿದೆ.

    ಆತ್ಮಹತ್ಯೆಗೆ ಯತ್ನಿಸಿರುವ ವಿದ್ಯಾರ್ಥಿನಿ ಈ ಕಾಲೇಜಿನಲ್ಲಿ ಬಿಎ ವ್ಯಾಸಂಗ ಮಾಡುತ್ತಿದ್ದಾಳೆ. ಯುವತಿ ತನ್ನ ಅಕ್ಕನ ಮನೆಯಲ್ಲಿ ವಾಸವಿದ್ದು ಕಾಲೇಜಿಗೆ ಬರುತ್ತಿದ್ದಳು. ನಿನ್ನೆ ಮನೆಯಲ್ಲಿ ಅಕ್ಕನ ಜತೆ ಜಗಳವಾಡಿಕೊಂಡಿದ್ದು, ಅದೇ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ.

    ಇದನ್ನೂ ಓದಿ: ಕಳೆದ ಐದು ವರ್ಷಗಳಲ್ಲಿ ಭಾರತವನ್ನು ಬಿಟ್ಟು ಹೋಗಿದ್ದಾರೆ ಆರು ಲಕ್ಷಕ್ಕೂ ಅಧಿಕ ಮಂದಿ!!!

    ಎರಡನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ ತಲೆ ಹಾಗೂ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಕಾಲೇಜು ಆಡಳಿತ ಮಂಡಳಿ ಕೂಡಲೇ ಆಕೆಯನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಿದ್ದಾರೆ. ಜೀವನ್​ಬಿಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

    ಒಮಿಕ್ರಾನ್​ ಮಾರಕವಲ್ಲ ಎಂಬ ಅಭಿಪ್ರಾಯದ ಬೆನ್ನಿಗೇ ಹೊರಬಿತ್ತು ಅದು ಜಾಗತಿಕವಾಗಿ ಅಪಾಯಕಾರಿ ಎನ್ನುವ ವಿಷಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts