More

    ಹೊಟ್ಟೆನೋವು ತಾಳಲಾರದೆ ಫ್ಯಾನ್​ಗೆ ನೇಣು ಹಾಕಿಕೊಂಡ ಯುವತಿ; ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

    ಬೆಂಗಳೂರು: ರಾಜ್ಯದಲ್ಲಿ ಒಂದಲ್ಲ ಒಂದು ಕಡೆ ನಿತ್ಯವೂ ಆತ್ಮಹತ್ಯೆ ಪ್ರಕರಣ ಸಂಭವಿಸುತ್ತಿದ್ದು, ಇತ್ತೀಚೆಗೆ ಸಾವಿಗೆ ಶರಣಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈಗ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಆ ಪಟ್ಟಿಗೆ ಸೇರಿದಂತಾಗಿದೆ.

    ಬೆಂಗಳೂರು ಉತ್ತರ ತಾಲ್ಲೂಕು ಮಾದನಾಯಕನಹಳ್ಳಿ ಸಮೀಪದ ಸಿದ್ಧನಹೊಸಹಳ್ಳಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಶಿಲ್ಪಾ (22) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ನಾರಾಯಣಪ್ಪ-ಮುನಿಲಕ್ಷ್ಮಮ್ಮ ದಂಪತಿಯ ಈ ಪುತ್ರಿ, ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಇದನ್ನೂ ಓದಿ: ಹಣಕ್ಕಾಗಿ ಹುಟ್ಟುಅಂಧ ಸ್ನೇಹಿತನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ; ಅಪರಾಧಿಗೆ ಜೀವಾವಧಿ ಶಿಕ್ಷೆ, ಒಂದು ಲಕ್ಷ ರೂ. ದಂಡ..

    ಪೀಣ್ಯದ ಪ್ರತಿಷ್ಠಿತ ಕಾಲೇಜಿನ ದ್ವಿತೀಯ ಎಂ.ಕಾಂ ವಿದ್ಯಾರ್ಥಿನಿಯಾಗಿರುವ ಶಿಲ್ಪಾ, ಹೊಟ್ಟೆನೋವಿನಿಂದ ಬಳಲುತ್ತಿದ್ದು, ಅದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ರಾಜ್ಯದಲ್ಲಿ ಹೆಚ್ಚಾದ ಕರೊನಾ ಆತಂಕ; ಸಿಎಂ ಸಭೆಯಲ್ಲಿ ಹೊರಬಿತ್ತು ಹೊಸ ಗೈಡ್​​ಲೈನ್ಸ್​: ಇಲ್ಲಿದೆ ವಿವರ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts