

ಮೈಸೂರು: ಹೊಟ್ಟೆ ನೋವು ತಾಳಲಾರದೇ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾಗಿರುವ ದುರಂತ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಗೆ 17 ವರ್ಷ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವಿನ ಹಾದಿ ಹಿಡಿದಿದ್ದಾಳೆ. ವಿದ್ಯಾರ್ಥಿನಿ ಗೋಳೂರು ಗ್ರಾಮದ ಮಹದೇವು ಎಂಬುವರ ಪುತ್ರಿ. ನಂಜನಗೂಡು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ವಿದ್ಯಾರ್ಥಿನಿಗೆ ಪದೇಪದೆ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿತ್ತು. ಇದರಿಂದ ಮನನೊಂದಿದ್ದ ಆಕೆ, ಮಾನಸಿಕವಾಗಿ ಕುಗಿದ್ದಳು. ಆಸ್ಟತ್ರೆಗಳನ್ನು ಸುತ್ತಿದರೂ ಹೊಟ್ಟೆನೋವು ಕಡಿಮೆಯಾಗುತ್ತಿಲ್ಲ ಎಂಬ ಚಿಂತಿಸುತ್ತಿದ್ದ ವಿದ್ಯಾರ್ಥಿನಿ, ಕೊನೆಗೆ ಸಾವಿಗೆ ಶರಣಾಗಿದ್ದಾಳೆ.
ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿರುವ ನಂಜನಗೂಡು ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗಳನ್ನು ಕಳೆದುಕೊಂಡ ಪಾಲಕರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.