ಬೆಂಗಳೂರು: ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಿದ್ದ ಪರಿಣಾಮ ಸವಾರ ಸಾಫ್ಟ್‌ವೇರ್ ಇಂಜಿನಿಯರ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಬಿಟಿಎಂ ೨ನೇ ಹಂತದ ನಿವಾಸಿ ಮನೀಶ್ ಕುಮಾರ್(೨೫) ಮೃತ ಸವಾರ. ಬುಧವಾರ ಬೆಳಗ್ಗೆ ೧೧.೪೫ಕ್ಕೆ ಮಡಿವಾಳದ ೨೧ನೇ ಮುಖ್ಯರಸ್ತೆ ಕಡೆಯಿಂದ ಸಿಲ್ಕ್ ಬೋರ್ಡ್ ಕಡೆಗೆ ತೆರಳುವಾಗ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ.
ಉತ್ತರಪ್ರದೇಶದ ಮೂಲದ ಮನೀಶ್ ಕುಮಾರ್ ಹಲವು ವರ್ಷಗಳಿಂದ ನಗರದಲ್ಲಿ ನೆಲೆಸಿದ್ದರು. ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಮನೀಶ್, ಮಹದೇವಪುರದ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ಬೆಳಗ್ಗೆ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ಮುಂದೆ ಹೋಗುತ್ತಿದ್ದ ಬಿಎಂಟಿಸಿ ಬಸ್‌ಗೆ ಪಾದಚಾರಿ ಅಡ್ಡಬಂದ ಹಿನ್ನೆಲೆಯಲ್ಲಿ ಚಾಲಕ ಬ್ರೇಕ್ ಹಾಕಿ ಬಸ್‌ನ ವೇಗವನ್ನು ತಗ್ಗಿಸಿದ್ದಾನೆ. ಈ ವೇಳೆ ಹಿಂದೆ ಬರುತ್ತಿದ್ದ ಮನೀಶ್, ಬಸ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಬ್ರೇಕ್ ಹಾಕಿದ ಪರಿಣಾಮ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಿದ್ದಿದ್ದಾರೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಮನೀಶ್ ಅವರನ್ನು ಸಾರ್ವಜನಿಕರು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಬಿದ್ದ ರಭಸಕ್ಕೆ ಹೊಟ್ಟೆ ಹಾಗೂ ತಲೆಯಲ್ಲಿ ಆಂತರಿಕ ರಕ್ತಸ್ರಾವವಾಗಿ ಚಿಕಿತ್ಸೆ ಫಲಿಸದೆ ಮನೀಶ್ ಮೃತಪಟ್ಟಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ತೆರಳಿ ಮಡಿವಾಳ ಸಂಚಾರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮನೀಶ್ ಮೃತದೇಹವನ್ನು ಆಸ್ಪತ್ರೆಗೆ ಕಳುಹಿಸಿ ಮರಣೋತ್ತರ ಪರೀಕ್ಷೆ ಮಾಡಿಸಿ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ಮಡಿವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಸ್ತೆ ವಿಭಜಕಕ್ಕೆ ಡಿಕ್ಕಿ, ಸವಾರ ಸಾವು
You Might Also Like
ನಿಮ್ಮ ಅಂಗೈನಲ್ಲಿ X ಚಿಹ್ನೆ ಇದೆಯಾ ನೋಡಿ… ಇದರ ಅರ್ಥ ತಿಳಿದ್ರೆ ನೀವು ಬೆರಗಾಗೋದು ಖಚಿತ!
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ನೀವು ಆರೋಗ್ಯವಾಗಿದ್ದೀರಾ? ನಿಮ್ಮ ದೇಹವು ನೀಡುವ ಈ ಸಂಕೇತಗಳಿಂದ ಸುಲಭವಾಗಿ ತಿಳಿಯಬಹುದು…
ಪ್ರಪಂಚದಾದ್ಯಂತ ವೇಗವಾಗಿ ಹೆಚ್ಚುತ್ತಿರುವ ಹಾಗೂ ಹರಡುತ್ತಿರುವ ಹಲವಾರು ರೋಗಗಳ ನಡುವೆ ಆರೋಗ್ಯವಾಗಿರುವುದೇ ಒಂದು ಸೌಭಾಗ್ಯ ಎಂದರೆ…
ಮೊಬೈಲ್ ಬಳಸಿದ್ರೆ ಬರುತ್ತೆ ಬ್ರೇನ್ ಕ್ಯಾನ್ಸರ್! ಸಂಶೋಧನೆಯಲ್ಲಿ ಭಯಲಾಯ್ತು ಭಯಾನಕ ಸತ್ಯ
ನವದೆಹಲಿ: ಪ್ರತಿಯೊಬ್ಬರ ಕೈಯಲ್ಲಿ ಫೋನ್ . ಈಗ ಮನೆಯಲ್ಲಿ ಎಷ್ಟೇ ಜನ ಇದ್ದರೂ ಎಲ್ಲರ ಕೈಯಲ್ಲೂ…