More

    ನಾಳೆ ದೇಶಾದ್ಯಂತ ಕಾಮೆಡ್-ಕೆ ಪರೀಕ್ಷೆ

    ಬೆಂಗಳೂರು: ಕರ್ನಾಟಕದ ಖಾಸಗಿ ಕಾಲೇಜುಗಳು ಮತ್ತು ಆಯ್ದ ಪ್ಯಾನ್-ಇಂಡಿಯಾ ವಿಶ್ವವಿದ್ಯಾಲಯಗಳಲ್ಲಿ ಪದವಿಪೂರ್ವ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಾಳೆ 2023ರ ಕಾಮೆಡ್​ಕೆ ಯುಜಿಇಟಿ ಪರೀಕ್ಷೆ ನಡೆಯಲಿದೆ.

    ಇದನ್ನೂ ಓದಿ: ಇ ಸ್ವತ್ತು ಕುರಿತಂತೆ ಸಾಕಷ್ಟು ದೂರು: ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಅಸಮಾಧಾನ

    ಸುಮಾರು 150 ಎಂಜಿನಿಯರಿಂಗ್ ಕಾಲೇಜು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಯಲಿದ್ದು, ಇದು ಎರಡು ಅವಧಿಗಳಲ್ಲಿ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 12ರವರೆಗೆ ಮೊದಲ ಸೇಷನ್​ ಹಾಗೂ ಮಧ್ಯಾಹ್ನ 2ರಿಂದ ಸಂಜೆ 5ರವರೆಗೆ ಎರಡನೇ ಸೇಷನ್ ನಡೆಯಲಿದೆ.

    ದೇಶದ ಒಟ್ಟು 180 ನಗರಗಳ 264 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಈ ಬಾರಿ ಒಟ್ಟು 90,607 ವಿದ್ಯಾರ್ಥಿಗಳು ಪರೀಕ್ಷೆಗಾಗಿ ನೋಂದಯಿಸಿಕೊಂಡಿದ್ದಾರೆ. ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಟಿಕೆಟ್, ಎರಡು ಪಾಸ್‌ಪೋರ್ಟ್ ಗಾತ್ರದ ಫೋಟೋ, ಅರ್ಜಿಯಲ್ಲಿ ಘೋಷಿಸಿದಂತೆ ID ಪುರಾವೆ, ಪಾರದರ್ಶಕ ನೀರಿನ ಬಾಟಲಿ ಮತ್ತು ಪೆನ್ಸಿಲ್​ನ್ನು ಮಾತ್ರ ಪರೀಕ್ಷಾ ಹಾಲ್‌ಗೆ ಕೊಂಡೊಯ್ಯಬಹುದು.(ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts