More

    ಕಾಮೆಡ್-ಕೆ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ

    ಬೆಂಗಳೂರು: ಖಾಸಗಿ ಕಾಲೇಜುಗಳಲ್ಲಿರುವ ಇಂಜಿನಿಯರಿಂಗ್ ಸೀಟುಗಳ ಭರ್ತಿಗೆ ಆಯೋಜಿಸುವ ಕಾಮೆಡ್-ಕೆ ಪ್ರವೇಶ ಪರೀಕ್ಷೆ ಜೂನ್ 20 ರಂದು ನಡೆಯಲಿದೆ.

    150 ಕ್ಕೂ ಹೆಚ್ಚು ನಗರಗಳಲ್ಲಿನ 400 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದೆ. ಈ ಬಾರಿ 80 ಸಾವಿರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ನಿರೀಕ್ಷೆ ಇದೆ ಎಂದು ಕಾಮೆಡ್-ಕೆ ಕಾರ್ಯಕಾರಿ ಕಾರ್ಯದರ್ಶಿ ಡಾ.ಕುಮಾರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಅರ್ಜಿ ಸಲ್ಲಿಕೆಗೆ ಮಾ.22 ರಿಂದ ಮೇ 20ರವರೆಗೆ ಅವಕಾಶ ನೀಡಿದೆ. ವಿದ್ಯಾರ್ಥಿಗಳು www.comedk.org ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಇದು ಸಂಪೂರ್ಣವಾಗಿ ಆನ್ ಲೈನ್ ನಲ್ಲಿ ನಡೆಯಲಿದೆ.

    ಇದನ್ನೂ ಓದಿ: ಲಖನೌ ಮೆಟ್ರೋ ರೈಲ್​ನಲ್ಲಿವೆ 292 ಖಾಲಿ ಹುದ್ದೆಗಳು: ಡಿಪ್ಲೋಮಾ ಪದವೀಧರರಿಗೆ ಆಹ್ವಾನ

    ಕಳೆದ ವರ್ಷ 60 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಕರೊನಾ ಹಿನ್ನೆಲೆಯಲ್ಲಿ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಇಳಿಮುಖವಾಗಿತ್ತು. ಕರೊನಾ ಸೋಂಕು ಪರಿ ಪೂರ್ಣವಾಗಿ ಹೋಗದೆ ಇರುವುದರಿಂದ ಈ ಬಾರಿ ಕೂಡ ಸುರಕ್ಷತಾ ಕ್ರಮ ಅನುಸರಿಸಿ ಪರೀಕ್ಷೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು. ಕಾಮೆಡ್-ಕೆ ನಲ್ಲಿ ಸುಮಾರು 50 ಸಾವಿರ ಇಂಜಿನಿಯರಿಂಗ್ ಸೀಟುಗಳು ಇರುತ್ತವೆ.

    ಗಳಗಳನೇ ಅತ್ತ ಪ್ರಶಾಂತ್ ಸಂಬರಗಿ​: ಬಿಗ್​ಬಾಸ್​ ಮನೆಯಲ್ಲಿ ಅವರಿಗೆ ಕಾಡಿದ್ದೇನು?

    ಲಕ್ಷುರಿ ಕ್ಯಾರವಾನ್​ ಖರೀದಿಸಿದ ಮಹೇಶ್​ ಬಾಬು: ಟಾಲಿವುಡ್​ನಲ್ಲೇ ದುಬಾರಿ ವ್ಯಾನಿಟಿ ವ್ಯಾನ್​ ಇದು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts