

ಬೆಂಗಳೂರು: ಕರ್ನಾಟಕ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ (ಕಾಮೆಡ್ಕೆ) ಯುಜಿಇಟಿಯ ತಾತ್ಕಾಲಿಕ ಕೀ ಉತ್ತರಗಳನ್ನು ಆಗಸ್ಟ್ 23 ರಂದು ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಲಿದೆ.
ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು comedk.org ನಿಂದ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಇದನ್ನೂ ಓದಿ: ಬಾಲಕಿ ಬಾಣಲೆಯಿಂದ ಬೆಂಕಿಗೆ… ಕಣ್ಣೀರುಕ್ಕಿಸುವ ಕತೆ ಇದು
ಆಗಸ್ಟ್ 23 ರಂದು ಕೀ ಉತ್ತರಗಳನ್ನು ಪ್ರಕಟಿಸಿದ ನಂತರ ವಿದ್ಯಾರ್ಥಿಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿರುತ್ತದೆ. ಅದರ ನಂತರ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗುತ್ತದೆ. ಫಲಿತಾಂಶವನ್ನು ಸೆಪ್ಟೆಂಬರ್ ನಲ್ಲಿ ಘೋಷಿಸುವ ನಿರೀಕ್ಷೆಯಿದೆ.