More

    ಲೋಕಸಭೆ ಕಲಾಪ ವೇಳೆ ಭದ್ರತಾ ಲೋಪ; ಸಂಸತ್ತನ್ನೇ ಕಾಯಲಾಗದ ಚೌಕಿದಾರನಿಗೆ ದೇಶ ಕಾಯಲು ಸಾಧ್ಯವೇ: ರಾಜ್ಯ ಕಾಂಗ್ರೆಸ್

    ಬೆಂಗಳೂರು: ಇತ್ತೀಚೆಗಷ್ಟೇ ಉದ್ಘಾಟನೆಯಾದ ನೂತನ ಸಂಸತ್​ ಭವನದಲ್ಲಿ ಭಾರಿ ಭದ್ರತಾ ಲೋಪ ಕಂಡುಬಂದಿದ್ದು, ಎರಡು ಪ್ರತ್ಯೇಕ ಘಟನೆಯಲ್ಲಿ ನಾಲ್ವರು ಅಪರಿಚಿತರು ಸದನದ ಒಳಗೆ ಮತ್ತು ಹೊರಗೆ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್​ ಘಟಕ ಸಂಸತ್ತನ್ನೇ ಕಾಯಲಾಗದ ಚೌಕಿದಾರನಿಗೆ ದೇಶ ಕಾಯಲು ಸಾಧ್ಯವೇ ಎಂದು ಪ್ರಶ್ನಿಸಿದೆ.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ರಾಜ್ಯ ಕಾಂಗ್ರೆಸ್ ಘಟಕ ಈ ಸಂಸತ್ ದಾಳಿಯ ಹಿಂದೆ ಪ್ರತಾಪ್ ಸಿಂಹರದ್ದು ಪ್ರಮುಖ ಪಾತ್ರವಿದೆ ಎಂದು ಆರೋಪಿಸಿದೆ.

    ಪ್ರತಾಪ್ ಸಿಂಹರದ್ದು ಪ್ರಮುಖ ಪಾತ್ರವಿದೆ

    300 ಕೆಜಿ RDX ಯಾವುದೇ ಅಡೆತಡೆ ಇಲ್ಲದೆ ಕಾಶ್ಮೀರದೊಳಗೆ ಬರುತ್ತದೆ. ಸ್ಪೋಟಕ ವಸ್ತು ಯಾವುದೇ ಅಡೆತಡೆ ಇಲ್ಲದೆ ಸಂಸತ್ತಿನೊಳಗೆ ಬರುತ್ತದೆ. ಸಂಸತ್ತನ್ನೇ ಕಾಯಲಾಗದ ಚೌಕಿದಾರನಿಗೆ ದೇಶ ಕಾಯಲು ಸಾಧ್ಯವೇ. ಈ ಮಟ್ಟಿಗೆ ಭದ್ರತಾ ಲೋಪವಾಗಿದ್ದು ಹೇಗೆ, ಯಾಕೆ. ಈ ಸಂಸತ್ ದಾಳಿಯ ಹಿಂದೆ ಪ್ರತಾಪ್ ಸಿಂಹರದ್ದು ಪ್ರಮುಖ ಪಾತ್ರವಿದೆ ಎಂದು ಆರೋಪಿಸಿದೆ.

    ಹಿಂದೆ 2001ರಲ್ಲಿ ಇದೇ ದಿನ ಸಂಸತ್ ಭವನದ ಮೇಲೆ ಉಗ್ರರ ದಾಳಿಯಾಗಿತ್ತು, ಆಗಲೂ ಬಿಜೆಪಿ ಆಡಳಿತವಿತ್ತು. ಈಗ ಸಂಸತ್ ಭವನದ ಒಳಗೆಯೇ ಭದ್ರತಾ ಲೋಪವಾಗಿದೆ. ಪುಲ್ವಾಮದಲ್ಲಿ ಯೋಧರನ್ನು ರಕ್ಷಿಸಲಾಗಲಿಲ್ಲ, ಸಂಸತ್ತಿನಲ್ಲಿ ಸಂಸದರನ್ನೂ ರಕ್ಷಿಸಲು ವಿಫಲವಾಗಿದೆ. ಈ ದಾಳಿಯಲ್ಲಿ ಪ್ರತಾಪ್ ಸಿಂಹರ ಹೆಸರು ಮೇಲ್ನೋಟದಲ್ಲೇ ಕಂಡುಬಂದಿದೆ. ಲೋಕಸಭೆ ಸ್ಪೀಕರ್​ ಈ ಕೂಡಲೇ ಪ್ರತಾಪ್​ ಸಿಂಹ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆ.

    ಇದನ್ನೂ ಓದಿ: ಮುಸ್ಲಿಮರು ಎಲ್ಲಾ ವಿವಾದಿತ ಧಾರ್ಮಿಕ ಸ್ಥಳಗಳನ್ನು ಹಿಂದೂಗಳಿಗೆ ಹಸ್ತಾಂತರಿಸಬೇಕು: ಆರ್​ಎಸ್​ಎಸ್​ ನಾಯಕ

    ಬಿಜೆಪಿ ನಾಯಕರು ತುಟಿ ಬಿಚ್ಚದಿರುವುದೇಕೆ

    ಸಂಸತ್ತಿಗೆ ನುಗ್ಗಿದ ಘಾತುಕರು ಪಾಸ್ ಪಡೆದಿದ್ದು ಪ್ರತಾಪ್ ಸಿಂಹರಿಂದ. ಈ ದಾಳಿಕೊರರು ಪ್ರತಾಪ್​ ಸಿಂಹ ಅವರ ಆಪ್ತ ವಲಯದವರೇ ಪ್ರತಾಪ್ ಸಿಂಹರಿಂದಲೂ ಈ ದಾಳಿಯ ಷಡ್ಯಂತ್ರ ನಡೆದಿತ್ತೇ. ಈ ಎಲ್ಲಾ ಸಂಗತಿಗಳ ತನಿಖೆ ನಡೆಸಲು ಇದುವರೆಗೂ ಪ್ರತಾಪ್ ಸಿಂಹರನ್ನು ವಶಕ್ಕೆ ಪಡೆದಿಲ್ಲವೇಕೆ. ದೇಶದಲ್ಲಿ ಭದ್ರತಾ ಲೋಪವಷ್ಟೇ ಅಲ್ಲ, ತನಿಖೆಯಲ್ಲಿ ಲೋಪವೂ ನಡೆಯುತ್ತಿರುವುದೇಕೆ ಎಂದು ಪ್ರಶ್ನಿಸಿದೆ.

    ಸಂಸತ್ ಭವನದೊಳಗೆ ಟಿಯರ್ ಗ್ಯಾಸ್ ಸ್ಪೋಟಿಸಿದ ಆಗಂತುಕರಿಗೆ ಅಕಸ್ಮಾತ್ ಕಾಂಗ್ರೆಸ್ ಸಂಸದರಿಂದ ಪಾಸ್ ಸಿಕ್ಕಿದಿದ್ದರೆ ಬಿಜೆಪಿಗರು ಹೇಗೆ ವರ್ತಿಸುತ್ತಿದ್ದರು. ಈಗೇಕೆ ಬಿಜೆಪಿ ನಾಯಕರು ಏನೂ ಆಗಿಯೇ ಇಲ್ಲ ಎಂಬಂತೆ ಮುಗುಮ್ಮಾಗಿದ್ದಾರೆ. ಭದ್ರತಾ ಲೋಪದ ಬಗ್ಗೆ ಬಿಜೆಪಿ ನಾಯಕರು ತುಟಿ ಬಿಚ್ಚದಿರುವುದೇಕೆ. ದೇಶ ರಕ್ಷಣೆಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿರುವುದಕ್ಕೆ ಇದು ಸ್ಪಷ್ಟ ಉದಾಹರಣೆಯಲ್ಲವೇ ಎಂದು ರಾಜ್ಯ ಕಾಂಗ್ರೆಸ್​ ಘಟಕ ಬಿಜೆಪಿ ವಿರುದ್ಧ ಕಿಡಿಕಾರಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts