More

    ಹಾನಗಲ್ಲ ಕುಮಾರ ಶಿವಯೋಗಿಗಳವರ ಸ್ಮರಣೋತ್ಸವ ಮಾ. 1ರಿಂದ

    ಹಾನಗಲ್ಲ: ಶಿವಯೋಗ ಮಂದಿರ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆ ಸಂಸ್ಥಾಪಕ ಹಾನಗಲ್ಲ ಲಿಂ.ಕುಮಾರ ಮಹಾಶಿವಯೋಗಿಗಳವರ 94ನೇ ಪುಣ್ಯ ಸ್ಮರಣೋತ್ಸವ ಮಾ. 1ರಿಂದ 3 ರವರೆಗೆ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

    ಮಾ. 1ರಂದು ಬೆಳಗ್ಗೆ 8 ಗಂಟೆಗೆ ಬಾಳೂರಿನ ಅಡವಿಸ್ವಾಮಿಮಠದ ಕುಮಾರಸ್ವಾಮಿಗಳು ಷಟ್​ಸ್ಥಲ ಧ್ವಜಾರೋಹಣ ನೆರವೇರಿಸಿ ಸ್ಮರಣೋತ್ಸವಕ್ಕೆ ಚಾಲನೆ ನೀಡುವರು. ಸಂಜೆ 6.30ಕ್ಕೆ ನಡೆಯುವ ಸ್ಮರಣೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ದೊರೆಸ್ವಾಮಿ ಮಠದ ಶಾಂತಲಿಂಗ ಸ್ವಾಮೀಜಿ ಹಾಗೂ ಜಿಗೇರಿ ಹಿರೇಮಠದ ಗುರುಸಿದ್ಧ ಶಿವಾಚಾರ್ಯ ಸ್ವಾಮಿಗಳು ಸಮ್ಮುಖ ವಹಿಸುವರು. ತಾಳಿಕೋಟಿ ಖಾಸ್ಗತ್ತೇಶ್ವರ ಮಠದ ಸಿದ್ಧಲಿಂಗ ದೇವರು ನುಡಿನಮನ ಸಲ್ಲಿಸಲಿದ್ದಾರೆ. ಲೇಖಕ ಸಿ.ಆರ್. ಯರವಿನತೆಲಿಮಠ ಬರೆದ ‘ಕಾರಣಿಕ ಕುಮಾರಯೋಗಿ’ ಪುಸ್ತಕ ಬಿಡುಗಡೆ ಜರುಗುವುದು.

    ಮಾ. 2ರಂದು ಬೆಳಗ್ಗೆ ಅಕ್ಕಿಆಲೂರಿನಿಂದ ಹಾನಗಲ್ಲ ವಿರಕ್ತಮಠದವರೆಗೆ ಪಾದಯಾತ್ರೆಯು ಅಕ್ಕಿಆಲೂರ ವಿರಕ್ತಮಠದ ಶಿವಬಸವ ಸ್ವಾಮಿಗಳ ನೇತೃತ್ವದಲ್ಲಿ ನಡೆಯಲಿದೆ. ಸಂಜೆ 6.30ಕ್ಕೆ ರಾಮದುರ್ಗದ ಶಾಂತವೀರ ಸ್ವಾಮೀಜಿ, ನವಲಗುಂದ ಗವಿಮಠದ ಬಸವಲಿಂಗ ಸ್ವಾಮೀಜಿ, ಬದಾಮಿ ನವಗ್ರಹ ಹಿರೇಮಠದ ಶಿವಪೂಜಾ ಶಿವಾಚಾರ್ಯ ಸ್ವಾಮೀಜಿ ಹಾಗೂ ವಿಜಯಪುರದ ಮಾನಗುಳಿ ಹಿರೇಮಠದ ಸಂಗನಬಸವ ಶಿವಾಚಾರ್ಯ ಸ್ವಾಮಿಗಳು ಸಮ್ಮುಖವಹಿಸುವರು.

    ಲೇಖಕ ಸುಭಾಷ ಹೊಸಮನಿ ಅವರ ’ಶರಣಾಮೃತ’ ಪುಸ್ತಕ ಬಿಡುಗಡೆಗೊಳ್ಳಲಿದೆ.

    ಮಾ. 3ರಂದು ಹಾನಗಲ್ಲ ಶ್ರೀಮಠದ ಕುಮಾರಸ್ವಾಮಿಗಳ ಸಾನ್ನಿಧ್ಯದಲ್ಲಿ ಬೆಳಗ್ಗೆ 11 ಗಂಟೆಗೆ ಸಾಮೂಹಿಕ ವಿವಾಹಗಳು ನಡೆಯಲಿವೆ. ಸ್ಮರಣೋತ್ಸವ ಸಮಿತಿ ಅಧ್ಯಕ್ಷ, ಸಂಸದ ಶಿವಕುಮಾರ ಉದಾಸಿ ಅಧ್ಯಕ್ಷತೆ ವಹಿಸುವರು. ಸಂಜೆ 6.30ಕ್ಕೆ ನಡೆಯುವ ಧರ್ಮಸಭೆಯಲ್ಲಿ ಬಿಜಕಲ್ ವಿರಕ್ತಮಠದ ಶಿವಲಿಂಗಸ್ವಾಮಿಗಳು, ಅಕ್ಕಿಆಲೂರ ವಿರಕ್ತಮಠದ ಶಿವಬಸವ ಸ್ವಾಮಿಗಳು, ಅಕ್ಕಿಆಲೂರ ಮುತ್ತಿನಕಂತಿಮಠದ ಚಂದ್ರಶೇಖರ ಶಿವಾಚಾರ್ಯರು, ಕೂಡಲದ ಮಹೇಶ್ವರ ಶಿವಾಚಾರ್ಯರು, ಹೇರೂರಿನ ಗುಬ್ಬಿ ನಂಜುಂಡೇಶ್ವರ ಸ್ವಾಮಿಗಳು ಸಮ್ಮುಖವಹಿಸುವರು. ಡಾ.ಹನುಮಂತ ಮಳಲಿ ‘ಭಾರತೀಯ ಜೀವನ ಪದ್ಧತಿ’ ವಿಷಯದ ಕುರಿತು ಉಪನ್ಯಾಸ ನೀಡುವರು ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts