

ಬೆಂಗಳೂರು: ಒಕ್ಕಲಿಗ ಯುವ ಬ್ರಿಗೇಡ್ ನ.9ಕ್ಕೆ ಮೈಸೂರಿನ ಮಾನಸ ಗಂಗೋತ್ರಿಯ ಸೆನೆಟ್ ಭವನದಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಪುಣ್ಯಸ್ಮರಣೆ ಹಾಗೂ ರಾಷ್ಟ್ರಕವಿ ಕುವೆಂಪು ಜಯಂತ್ಯೋತ್ಸವ ಹಮ್ಮಿಕೊಂಡಿದೆ.
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಜ್ಯೋತಿ ಬೆಳಗಿಸಲಿದ್ದು, ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ರವರು ಅಧ್ಯಕ್ಷತೆ ವಹಿಸಲಿದ್ದಾರೆಂದು ಒಕ್ಕಲಿಗ ಯುವ ಬ್ರಿಗೇಡ್ ಅಧ್ಯಕ್ಷ ನಂಜೇಗೌಡ ನಂಜುಂಡ ತಿಳಿಸಿದ್ದಾರೆ .
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮೈಸೂರು ಮಠದ ಕಾರ್ಯದರ್ಶಿ ಶ್ರೀಸೋಮೇಶ್ವರನಾಥ ಸ್ವಾಮಿಗಳು, ರೇಷ್ಮೆ ಹಾಗೂ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ , ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಡಿಸಿಎಂ ಡಾ. ಅಶ್ವಥ್ ನಾರಾಯಣ್, ಶಾಸಕರಾದ ಡಾ.ಮಂಥರ್ ಗೌಡ, ಕೆ. ಹರೀಶ್ ಗೌಡ , ರಾಜಸ್ತಾನದ ಐಜಿಪಿ ರಾಘವೇಂದ್ರ ಸುಹಾಸ್, ರಾಜ್ಯ ಕಾರ್ಮಿಕ ಆಯುಕ್ತ ಡಾ.ಹೆಚ್. ಎನ್ ಗೋಪಾಲಕೃಷ್ಣ , ದಕ್ಷಿಣ ಪ್ರಾಂತ್ಯ ಸಿಬ್ಬಂದಿ ನೇಮಕಾತಿ ಆಯೋಗದ ಪ್ರಾದೇಶಿಕ ನಿರ್ದೇಶಕ ಕೆ ನಾಗರಾಜ್ , ಆಂತರಿಕ ಭದ್ರತಾ ವಿಭಾಗದ ಎಸ್ಪಿ ಡಾ.ಎ.ಎನ್. ಪ್ರಕಾಶಗೌಡ ಮತ್ತಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಇದೇ ವೇಳೆ ಐಎಎಸ್ ಅಧಿಕಾರಿ ಡಾ.ನಾಗಾರ್ಜುನ್ ಬಿ ಗೌಡ,ಪಿ.ವಿ.ಬೈರಪ್ಪ , ಭವ್ಯಶ್ರೀ ಸನ್ಮಾನಿಸಲಾಗುವುದು. ಡಾ. ಕೆ.ಚಿದಾನಂದಗೌಡ ಹಾಗೂ ತಾರಿಣಿ ಚಿದಾನಂದರನ್ನು ವಿಶೇಷವಾಗಿ ಅಭಿನಂದಿಸಲಾಗುವುದು.