ವಿದ್ಯಾರ್ಥಿ ಭವಿಷ್ಯ ರೂಪಿಸಲು ಶ್ರಮ

kenjur
ಕೆಂಜೂರು ವೀರೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೀರ್ತಿಶೇಷ ಮಾರಾಳಿಮನೆ ನಾರಾಯಣ ಶೆಟ್ಟಿ ಇವರ 20ನೇ ವರ್ಷದ ಪುಣ್ಯಸ್ಮರಣಾ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಅಭ್ಯಾಸಕ್ಕಾಗಿ ಪಾಠೋಪಕರಣಗಳನ್ನು ಹಸ್ತಾಂತರಿಸಲಾಯಿತು
Published on

ಕೊಕ್ಕರ್ಣೆ: ಕೆಂಜೂರು ಶಾಲೆಯಲ್ಲಿ ಶಿಕ್ಷಕರಾಗಿ, ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸಿ ನಿಧನರಾದ ಮಾರಾಳಿಮನೆ ನಾರಾಯಣ ಶೆಟ್ಟಿಯವರು ಚಿರಸ್ಮರಣೀಯ. ಸಮಾಜಕ್ಕಾಗಿ ಸೇವೆ ಸಲ್ಲಿಸಿ, ವಿದ್ಯಾರ್ಥಿಗಳಿಗೆ ಸಂಸ್ಕಾರ, ಸಂಸ್ಕೃತಿ ತಿಳಿಯಪಡಿಸಿ ಸಮಾಜದಲ್ಲಿ ಸತ್ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶ್ರಮಿಸಿದವರು ಎಂದು ನಿವೃತ್ತ ಮುಖ್ಯಶಿಕ್ಷಕ ರಾಮಕೃಷ್ಣ ಅಡಿಗ ಹೇಳಿದರು.

ಕೆಂಜೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೀರ್ತಿಶೇಷ ಮಾರಾಳಿಮನೆ ನಾರಾಯಣ ಶೆಟ್ಟಿಯವರ 20ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಸಂಚಾಲಕಿ ವಿದ್ಯಾ ಎಸ್.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಶಿಧರ್ ಶೆಟ್ಟಿ, ನಿವೃತ್ತ ಮುಖ್ಯಶಿಕ್ಷಕಿ ಧರ್ಮಾವತಿ ಶೆಡ್ತಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಘುರಾಮ ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷೆ ಕುಸುಮಾ, ಹಳೇ ವಿದ್ಯಾರ್ಥಿಗಳಾದ ಸುಬ್ಬಣ್ಣ ಶೆಟ್ಟಿ ಕೆಂಜೂರು, ಉದಯ ಶೆಟ್ಟಿ ಕೆಂಜೂರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳ್ಕೆಬೈಲು ಶಿರಿಯಾರ ಮುಖ್ಯ ಶಿಕ್ಷಕಿ ಪೂರ್ಣಿಮಾ ಜೆ.ಶೆಟ್ಟಿ, ಮಾಜಿ ಸೈನಿಕ ಜಯರಾಮ ಶೆಟ್ಟಿ, ನಿವೃತ್ತ ಶಿಕ್ಷಕ ಸೀತಾರಾಮ ಶೆಟ್ಟಿ, ಗೀತಾ ಶೆಟ್ಟಿ, ಉಷಾ ಶೆಟ್ಟಿ, ಸಿಎ ಮನೋಹರ ಶೆಟ್ಟಿ ಕೆಂಜೂರು, ಮಹೇಶ್ ಶೆಟ್ಟಿ ಕೆಂಜೂರು, ಹಳೇ ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಮಾರಾಳಿಮನೆ ಮತ್ತು ಕಣಂಜಾರು ದೇವಶ್ಯಪಟ್ಟದಮನೆ ಕುಟುಂಬಸ್ಥರು ಮತ್ತಿತರರು ಉಪಸ್ಥಿತರಿದ್ದರು.

ನಿವೃತ್ತ ಶಿಕ್ಷಕ ಕೃಷ್ಣ ಹಾಂಡ ಸ್ವಾಗತಿಸಿದರು. ಶಿಕ್ಷಕ ಅಶೋಕ್ ಕುಮಾರ್ ಶೆಟ್ಟಿ ನಿರೂಪಿಸಿದರು. ಮುಖ್ಯ ಶಿಕ್ಷಕ ನವೀನ್ ಕುಮಾರ್ ಶೆಟ್ಟಿ ವಂದಿಸಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಅಭ್ಯಾಸಕ್ಕಾಗಿ ಪಾಠೋಪಕರಣಗಳನ್ನು ಶಾಲೆಗೆ ಹಸ್ತಾಂತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net